Breaking News

ವಾಟ್ಸಪ್ ಡ್ರಗ್ಸ್ ಗ್ರೂಪ್‍ಗೆ ದೀಪಿಕಾ ಅಡ್ಮಿನ್ – ಎನ್‍ಸಿಬಿ ಮಾಹಿತಿ ರಿವೀಲ್

Spread the love

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿ ತನಿಖೆಯನ್ನು ಚುರುಕುಗೊಳಿಸಿದ್ದು, ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ರಕುಲ್‍ಪ್ರೀತ್ ಸಿಂಗ್ ಹಾಗೂ ಸಾರಾ ಅಲಿ ಖಾನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಸ್ಫೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಡ್ರಗ್ಸ್ ಕುರಿತು ಚಾಟ್ ಮಾಡುತ್ತಿದ್ದ ವಾಟ್ಸಪ್ ಗ್ರೂಪ್‍ಗೆ ದೀಪಾಕಾ ಪಡುಕೋಣೆ ಅಡ್ಮಿನ್ ಆಗಿದ್ದರು ಎಂದು ಸ್ವತಃ ಎನ್‍ಸಿಬಿ ಮೂಲಗಳು ತಿಳಿಸಿವೆ.

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವಾಗಲೇ ಡ್ರಗ್ಸ್ ದಂಧೆ ಕುರಿತು ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದ್ದು, ಸುಶಾಂತ್ ಸಿಂಗ್ ರಜಪೂತ್ ಪ್ರಿಯತಮೆ, ನಟಿ ರಿಯಾ ಚಕ್ರವರ್ತಿ ಹಾಗೂ ಇತರ ಡ್ರಗ್ ಪೆಡ್ಲರ್‍ಗಳನ್ನು ವಿಚಾರಣೆ ನಡೆಸುತ್ತಿದ್ದಾಗ ಬಾಲಿವುಡ್‍ನ ಹಲವು ನಟ, ನಟಿಯರು ಹಾಗೂ ನಿರ್ಮಾಪಕರು ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿ ಈಗಾಗಲೇ ಹತ್ತಾರು ನಟಿಯರನ್ನು ವಿಚಾರಣೆ ನಡೆಸಿದೆ.

ಈ ಹಿಂದೆ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್‍ ಗೆ ನೋಟಿಸ್ ನೀಡಿತ್ತು. ನಂತರ ಸ್ವತಃ ದೀಪಿಕಾ ಪಡುಕೋಣೆಯವರಿಗೇ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಈ ವೇಳೆ ವಾಟ್ಸಪ್ ಕುರಿತು ಮಹತ್ವದ ಮಾಹಿತಿ ಹೊರ ಬಿದ್ದಿದ್ದು, ಡ್ರಗ್ಸ್ ಕುರಿತ ಮೂವರಿದ್ದ ಗ್ರೂಪ್‍ಗೆ ದೀಪಿಕಾ ಪಡುಕೋಣೆಯವರೇ ಅಡ್ಮಿನ್ ಆಗಿದ್ದರು ಎಂದು ತಿಳಿದು ಬಂದಿದೆ. ಈ ವಾಟ್ಸಪ್ ಗ್ರೂಪ್‍ನಲ್ಲಿ ನಟಿಯ ಮ್ಯಾನೇಜರ್ ಕರಿಷ್ಮಾ ಪ್ರಕಾಶ್, ಜಯಾ ಸಾಹ ಅವರೂ ಭಾಗಿಯಾಗಿದ್ದಾರೆ. ಈ ಕುರಿತು ಎನ್‍ಸಿಬಿ ಈಗಾಗಲೇ ಕರಿಷ್ಮಾ ಅವರ ವಿಚಾರಣೆ ನಡೆಸಿದೆ. ದೀಪಿಕಾ ಅವರು ಶನಿವಾರ ವಿಚಾರಣೆಗೆ ಹಾಜರಾಗಲಿದ್ದಾರೆ.


Spread the love

About Laxminews 24x7

Check Also

ಬೆಮುಲ್ ಗೆ ಬಂದ 13 ಕೋಟಿ ರೂಪಾಯಿ ಲಾಭದಲ್ಲಿ ಹೈನುಗಾರ ರೈತರಿಗೆ ವಿವಿಧ ಸೌಲಭ್ಯಗಳಿಗಾಗಿ 10 ಕೋಟಿ ರೂಪಾಯಿ ಮೀಸಲು- ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the loveಬೆಮುಲ್ ಗೆ ಬಂದ 13 ಕೋಟಿ ರೂಪಾಯಿ ಲಾಭದಲ್ಲಿ ಹೈನುಗಾರ ರೈತರಿಗೆ ವಿವಿಧ ಸೌಲಭ್ಯಗಳಿಗಾಗಿ 10 ಕೋಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ