Breaking News

ಹಿಂದೂ-ಮುಸ್ಲಿಂರನ್ನು ಬೇರೆ ಮಾಡೋ ಕೆಲಸ ಎಸ್ ಡಿಪಿಐ- ಪಿಎಫ್‌ಐ ಮಾಡುತ್ತಿದ್ದವು: ಈಶ್ವರಪ್ಪ

Spread the love

ಶಿವಮೊಗ್ಗ: ರಾಷ್ಟ್ರದ್ರೋಹಿ ಚಟುವಟಿಕೆ ಮಾಡಿದ ಪಿಎಫ್ ಐ ಮತ್ತು ಎಸ್ ಡಿಪಿಐ ನಾಯಕರ ಬಂಧನ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ನಾನು ಸ್ವಾಗತಿಸುತ್ತೇನೆ ಎಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದು ಹಿಂದೂ – ಮುಸ್ಲಿಂ- ಕ್ರೈಸ್ತರು ಒಟ್ಟಾಗಿ ಬಾಳಲು.

ಎಸ್ ಡಿಪಿಐ ಮತ್ತು ಪಿಎಫ್‌ಐ ಹಿಂದೂ-ಮುಸ್ಲಿಂರನ್ನು ಬೇರೆ ಬೇರೆ ಮಾಡು ಕೆಲಸ ಮಾಡುತ್ತಿದ್ದರು. ಗೋಹತ್ಯೆ ಜೊತೆಗೆ ಹಿಂದೂ ಸಂಸ್ಕೃತಿಗೆ ಅವಮಾನ ಮಾಡುವ ಕೆಲಸ ಮಾಡುತ್ತಿದ್ದರು. ಈ ರಾಷ್ಟ್ರದ್ರೋಹಿ ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆ ಇರಬಾರದೆಂದು ರಾಷ್ಟ್ರಭಕ್ತ ಮುಸ್ಲಿಂರೂ ಕೂಡಲೇ ಖಂಡನೆ ಮಾಡಬೇಕು. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬೆಂಬಲ ಕೊಡಬೇಕು ಎಂದರುಈ ದಾಳಿ ಕುರಿತು ಕಾಂಗ್ರೆಸ್ ನವರು ಇನ್ನೂ ಬಾಯಿ ಬಿಟ್ಟಿಲ್ಲ. ಕೇಂದ್ರ ಸರ್ಕಾರ ಸರಿಯಾದ ಕ್ರಮ ತೆಗೆದುಕೊಂಡಿರುವ ಕುರಿತು ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ಇಲ್ಲ. ಕಾಂಗ್ರೆಸ್ ಹಿಂದಿನಿಂದಲೂ ರಾಷ್ಟ್ರದ್ರೋಹಿಗಳಿಗೆ ಬೆಂಬಲ ಕೊಡುವ ಕೆಲಸ ಮಾಡಿದೆ. ಇದಕ್ಕೂ ನಿಜಕ್ಕೂ ಕೂಡ ದೊಡ್ಡ ಅಪಮಾನ. 


Spread the love

About Laxminews 24x7

Check Also

ಬನ್ನೇರುಘಟ್ಟದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು

Spread the loveಶಿವಮೊಗ್ಗ: ಇಲ್ಲಿನ ಮೃಗಾಲಯದಲ್ಲಿ ನೀರಾನೆ  ದಾಳಿಯಿಂದ ಮೃತಪಟ್ಟ ಟ್ರೈನಿ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ  ಅವರ ಹೆಸರನ್ನು ಬನ್ನೇರುಘಟ್ಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ