Breaking News

ಬಾಗಲಕೋಟೆ: ಸಚಿವ ಮುರುಗೇಶ ನಿರಾಣಿ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

Spread the love

ಬಾಗಲಕೋಟೆ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಮುಧೋಳದಲ್ಲಿ ಸಚಿವ ಮುರುಗೇಶ ನಿರಾಣಿಯವರ ನಿವಾಸಕ್ಕೆ ಭೇಟಿ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಜನ್ಮ ದಿನ ಕಾರ್ಯಕ್ರಮಕ್ಕೆ ಬಂದಿದ್ದ ಅವರು ನಿರಾಣಿ ಅವರ ನಿವಾಸದ ಬಳಿ ಇರುವ ಹೆಲಿಪ್ಯಾಡ್ ನಲ್ಲಿ ಇಳಿದಿದ್ದರು.

ಕಾರ್ಯಕ್ರಮಕ್ಕೆ ತೆರಳುವ ಮುನ್ನ ನಿರಾಣಿ ಮನೆಗೆ ಹೋದರು.

ಇದಕ್ಕೂ ಮುನ್ನ ಜಮಖಂಡಿಯಲ್ಲಿ‌ ನಡೆದ ಸಿದ್ದು ನ್ಯಾಮಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಇಬ್ಬರೂ ಪಾಲ್ಗೊಂಡಿದ್ದರು. ಸಂಗಮೇಶ ಅವರು ಅರ್ಧದಲ್ಲಿಯೇ ಕಾರ್ಯಕ್ರಮದಿಂದ ಎದ್ದು ಬಂದಿದ್ದರು.

2018 ರಲ್ಲಿ ಜಮಖಂಡಿಯಿಂದ ಬಿಜೆಪಿ ಟಿಕೆಟ್ ದೊರೆಯದ ಕಾರಣ ಸಂಗಮೇಶ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಈ ಬಾರಿಯೂ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾಗಬಹುದೇ ಎಂಬ ಚರ್ಚೆಗೆ ಭೇಟಿ ಕಾರಣವಾಗಿದೆ.


Spread the love

About Laxminews 24x7

Check Also

ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು ಓಡಿಸಿದ ಮಹಿಳೆ…!!!

Spread the love ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ