Breaking News

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ದೊಡ್ಡ ಬದಲಾವಣೆ! ಇಲ್ಲಿದೆ ಮಾಹಿತಿ

Spread the love

ವದೆಹಲಿ: ನೀವು ತಂದೆಯಾಗಿದ್ದರೆ ನಿಮ್ಮ ಮಗಳ ಭವಿಷ್ಯವನ್ನು ಆರ್ಥಿಕವಾಗಿ ಸಮೃದ್ಧವಾಗಿರಿಸಬಹುದು. ಮಗಳು ಎಂದಿಗೂ ಹಣದ ಸಮಸ್ಯೆ ಎದುರಿಸಬಾರದು ಅಂತಾ ಬಯಸಿದರೆ ಸರ್ಕಾರದ ಈ ಅದ್ಭುತ ಯೋಜನೆಯಲ್ಲಿ ಹೂಡಿಕೆ ಪ್ರಾರಂಭಿಸಬಹುದು. ಈ ವಿಶೇಷ ಯೋಜನೆಯಲ್ಲಿ ಹೂಡಿಕೆ ಮಾಡುವುದರಿಂದ ನಿಮ್ಮ ಮಗಳು 21 ವರ್ಷಗಳಲ್ಲಿ ಮಿಲಿಯನೇರ್ ಆಗುತ್ತಾಳೆ.

ಈ ಯೋಜನೆಯಲ್ಲಿ ನೀವು ಪ್ರತಿದಿನ 416 ರೂ. ಹೂಡಿಕೆ ಮಾಡಬೇಕು. ಈ 416 ರೂ. ಸಣ್ಣ ಮೊತ್ತದ ಹೂಡಿಕೆಯು ನಿಮ್ಮ ಮಗಳಿಗೆ 65 ಲಕ್ಷ ರೂ.ನಷ್ಟು ಸಂಪತ್ತನ್ನು ಸೃಷ್ಟಿಸಿಕೊಡುತ್ತದೆ. ಇದರೊಂದಿಗೆ ನಿಮ್ಮ ಮಗಳ ವಿದ್ಯಾಭ್ಯಾಸದ ಖರ್ಚು ಕೂಡ ಸುಲಭವಾಗುತ್ತದೆ.

ಸುಕನ್ಯಾ ಸಮೃದ್ಧಿ ಯೋಜನೆ

ಸುಕನ್ಯಾ ಸಮೃದ್ಧಿ ದೀರ್ಘಾವಧಿಯ ಯೋಜನೆಯಾಗಿದ್ದು, ಇದರಲ್ಲಿ ಹೂಡಿಕೆ ಮಾಡುವ ಮೂಲಕ ನಿಮ್ಮ ಮಗಳ ಶಿಕ್ಷಣ ಮತ್ತು ಉಜ್ವಲ ಭವಿಷ್ಯವನ್ನು ರೂಪಿಸಬಹುದು. ಇದಕ್ಕಾಗಿ ನೀವು ಹೆಚ್ಚು ಹಣ ಹೂಡಿಕೆ ಮಾಡುವ ಅಗತ್ಯವಿಲ್ಲ. ಈ ಯೋಜನೆಯಲ್ಲಿ ಹಲವು ಪ್ರಮುಖ ಬದಲಾವಣೆಗಳಾಗುತ್ತಿವೆ. ಹೊಸ ನಿಯಮಗಳಡಿ ಖಾತೆಯಲ್ಲಿನ Wrong Interestನ್ನು ಹಿಂತಿರುಗಿಸುವ ನಿಬಂಧನೆಯನ್ನು ತೆಗೆದುಹಾಕಲಾಗಿದೆ. ಇದಲ್ಲದೆ ಪ್ರತಿ ಹಣಕಾಸು ವರ್ಷದ ಕೊನೆಯಲ್ಲಿ ಖಾತೆಯ ವಾರ್ಷಿಕ ಬಡ್ಡಿಯನ್ನು ಜಮಾ ಮಾಡಲಾಗುತ್ತದೆ. ನಿಮ್ಮ ಮಗಳು 10 ವರ್ಷಗಳ ನಂತರವೇ ಖಾತೆ ನಿರ್ವಹಿಸಬಹುದೆಂಬ ನಿಯಮ ಮೊದಲು ಇತ್ತು. ಆದರೆ ಹೊಸ ನಿಯಮಗಳ ಪ್ರಕಾರ ನಿಮ್ಮ ಮಗಳಿಗೆ 18 ವರ್ಷಕ್ಕಿಂತ ಮೊದಲು ಖಾತೆಯನ್ನು ನಿರ್ವಹಿಸಲು ಅನುಮತಿಸುವುದಿಲ್ಲ. ಪೋಷಕರು ಮಾತ್ರ ಖಾತೆಯನ್ನು ನಿರ್ವಹಿಸುವುದನ್ನು ಮುಂದುವರಿಸುತ್ತಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ