Breaking News
Home / ಬಳ್ಳಾರಿ / ಬಳ್ಳಾರಿ: ಮಟ್ಕಾ ಬುಕ್ಕಿ, ಅಕ್ಕಿ ವ್ಯಾಪಾರಿಯನ್ನು ಅಟ್ಟಾಡಿಸಿಕೊಂಡು ಹತ್ಯೆಗೈದ ದುಷ್ಕರ್ಮಿಗಳು

ಬಳ್ಳಾರಿ: ಮಟ್ಕಾ ಬುಕ್ಕಿ, ಅಕ್ಕಿ ವ್ಯಾಪಾರಿಯನ್ನು ಅಟ್ಟಾಡಿಸಿಕೊಂಡು ಹತ್ಯೆಗೈದ ದುಷ್ಕರ್ಮಿಗಳು

Spread the love

ಳ್ಳಾರಿ : ನಗರದ ರೇಡಿಯೋ ಪಾರ್ಕ್ ವೃತ್ತದಲ್ಲಿ ಅಕ್ಕಿ ವ್ಯಾಪಾರಿ ಮಟ್ಕಾ ಬುಕ್ಕಿ ಕುಂಟ ಮಂಜುನಾಥ ಎನ್ನುವವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.

ನಗರದ ಕೊಲಿಮಿ ಬಜಾರ್ ನಿವಾಸಿಯಾದ ಕುಂಟ ಮಂಜುನಾಥ್ ನನ್ನು ರೇಡಿಯೋ ಪಾರ್ಕ್ ಅಯ್ಯಪ್ಪ ಸ್ವಾಮಿ ದೇವಸ್ಥಾನ ಬಳಿ ಬುಧವಾರ ಬೆಳಗಿನ ಜಾವ ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಈ ವೇಳೆ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸಿದ ಮಂಜುನಾಥ್ ನನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಬುಧವಾರ ಬೆಳಗ್ಗೆ ಎಸ್ ಪಿ ಸೈದುಲು ಅಡಾವತ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ದುಷ್ಕಮಿಗಳು ಬೈಕ್ ನಲ್ಲಿ ಬಂದು ಕೃತ್ಯ ಎಸಗಿದ್ದಾರೆ. ಕೊಲೆ‌ ಮಾಡುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ದೃಶ್ಯಗಳನ್ನ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ