Breaking News

ಹುಕ್ಕೇರಿ ಬಾಲಕನ ರುಂಡ ಕತ್ತರಿಸಿದ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್

Spread the love

ಬೆಳಗಾವಿ: ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿಯ ಹಿನ್ನೀರಿನಲ್ಲಿ ರುಂಡವಿಲ್ಲದ ಬಾಲಕನ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸೂರ ಗ್ರಾಮದ ನೂರಅಹ್ಮದ್ ಕೊಣ್ಣೂರ ಮತ್ತು ಹನುಮಂತ ಬೇವನೂರ ಬಂಧಿತರು. ಹೊಸೂರ ಗ್ರಾಮದ 12 ವರ್ಷದ ಬಾಲಕ ಹತ್ಯೆಗೀಡಾಗಿದ್ದ.

ಪ್ರಕರಣದ ಹಿನ್ನೆಲೆ: ಸೆ.20ರಂದು ಮಾಳಪ್ಪ ನಾಪತ್ತೆ ಆಗಿರುವ ಬಗ್ಗೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದ ವೇಳೆ ಹಿರಣ್ಯಕೇಶಿ ನದಿಯ ಹಿನ್ನೀರಿನಲ್ಲಿ ರುಂಡವಿಲ್ಲದ ಶವವೊಮದು ಪತ್ತೆಯಾಗಿತ್ತು. ಬಳಿಕ ತನಿಖೆ ಆರಂಭಿಸಿದ ಪೊಲೀಸರಿಗೆ ನದಿಯಲ್ಲಿ ಬಾಲಕನ ಮೃತದೇಹ ದೊರೆತಿತ್ತು. ಬಳಿಕ ಕೊಲೆ ಆರೋಪಿಗಳಿಗಾಗಿ ಬಲೆ ಬೀಸಿದ್ದ ಪೊಲೀಸರು ಒಂದೇ ವಾರದಲ್ಲಿ ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮೂಲತಃ ಚಿಕ್ಕೋಡಿ ತಾಲೂಕಿನ ನಾಯಿಂಗ್ಲಜ್ ಗ್ರಾಮದ ಬಾಲಕ ಶಾಲೆ ಕಲಿಯುವುದಕ್ಕಾಗಿ ಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದ ಅತ್ತೆ ಮನೆಯಲ್ಲಿ ವಾಸವಾಗಿದ್ದನು. ಕೊಲೆ ಪ್ರಕರಣದ ಪ್ರಮುಖ ಆರೋಪಿ ನೂರಅಹ್ಮದ್ ಕೊಣ್ಣೂರ ಬಾಲಕನ ಅತ್ತೆ ಜತೆಗೆ ಅನೈತಿಕ ಸಂಬಂಧ ಬೆಳೆಸಲು ಪ್ರಯತ್ನಿಸುತ್ತಿದ್ದನು. ಆದರೆ, ಆಕೆ ಆತನ ಬಲೆಗೆ ಬಿದ್ದಿರಲಿಲ್ಲ. ಹಾಗಾಗಿ ಸಿಟ್ಟಿನಿಂದ ನೂರ್​ಅಹ್ಮದ್​ ಕುಡುಗೋಲಿನಿಂದ ಬಾಲಕನನ್ನು ಹತ್ಯೆ ಮಾಡಿ ರುಂಡ ಬೇರ್ಪಡಿಸಿದ್ದನು.


Spread the love

About Laxminews 24x7

Check Also

ವಿಕಲಚೇತನ ವ್ಯಕ್ತಿಗಳಿಗೆ ಕೌಶಲ್ಯ ತರಬೇತಿ: 100 ವಿಕಲಚೇತನರಿಗೆ ಪದವಿ ಪ್ರಧಾನ

Spread the loveವಿಕಲಚೇತನರನ್ನು ಆರ್ಥಿಕವಾಗಿ ಸ್ವಾಲವಂಬಿಗಳನ್ನಾಗಿ ಮಾಡಲು ಡಿಯಾಜಿಯೊ ಇಂಡಿಯಾ, ಅಂಗವಿಕಲ ವ್ಯಕ್ತಿಗಳ ಕೌಶಲ್ಯ ಮಂಡಳಿ ಸಹಭಾಗಿತ್ವದಲ್ಲಿ ಕೌಶಲ್ಯ ತರಬೇತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ