Breaking News

ಪೇ ಸಿಎಂ ಮಾದರಿ ಪೇ ಮೇಯರ್ ಸದ್ದು: ವಾಣಿಜ್ಯ ನಗರಿಯ ಗೋಡೆಗಳ ಮೇಲೆ ರಾರಾಜಿಸುತ್ತಿವೆ ಪೋಸ್ಟರ್

Spread the love

ಹುಬ್ಬಳ್ಳಿ: ದೇಶಾದ್ಯಂತ ಪೇ ಸಿಎಂ ಪೋಸ್ಟರ್​ಗಳು ಸಾಕಷ್ಟು ಸುದ್ದಿ ಮಾಡಿದ್ದವು‌. ಅದೇ ಮಾದರಿಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಈಗ ಪೇ ಮೇಯರ್ ಪೋಸ್ಟರ್ ಅಭಿಯಾನ ಜೋರಾಗಿದೆ.

ಪೇ ಸಿಎಂ ಚರ್ಚೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಪೇ ಮೇಯರ್ ಅಭಿಯಾನದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು‌. ಆದರೆ ಈಗ ಅಭಿಯಾನ ಪೋಸ್ಟರ್ ರೂಪ ಪಡೆದುಕೊಂಡಿದ್ದು, ನಗರದ ಪ್ರಮುಖ ಬೀದಿಗಳು ಹಾಗೂ ಗೋಡೆಗಳ ಮೇಲೆ ಪೋಸ್ಟರ್ ಹಚ್ಚುವ ಮೂಲಕ ಅಭಿಯಾನ ನಡೆಸುತ್ತಿದ್ದಾರೆ.

ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮದ ಹೆಸರಲ್ಲಿ ಸುಮಾರು 1.5 ಕೋಟಿ ದುಂದು ವೆಚ್ಚ ಮಾಡಿದ್ದಕ್ಕೆ ಪೇ ಮೇಯರ್ ಅಭಿಯಾನ ಆರಂಭಿಸಿರುವ ಕಾಂಗ್ರೆಸ್ ನಾಯಕ ರಜತ್ ಉಳ್ಳಾಗಡ್ಡಿಮಠ ಅವರು, ಮೇಯರ್ ವಿರುದ್ದ ವಾಗ್ದಾಳಿ ನಡೆಸಿದರು. ನಗರ ರಸ್ತೆ ದುರಸ್ತಿಗೆ ಹಣವಿಲ್ಲ ಎನ್ನುವ ಮೇಯರ್ ಈರೇಶ ಅಂಚಟಗೇರಿ ಅವರು ಪೌರ ಸನ್ಮಾನ‌ ಹೆಸರಿನಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದ್ದಾರೆ. ಪೆಂಡಾಲ್ ಹಾಕಿದ ನಂತರ ಕೊಟೇಶನ್ ಕೇಳಿ ಹುಬ್ಬಳ್ಳಿಯ ಮಾನ ಕಳೆದ ಮೇಯರ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ