Breaking News

ಭೂ ಪರಿವರ್ತನೆ ಸರಳ ಕ್ರಮ: ಸಚಿವ ಆರ್‌.ಅಶೋಕ್‌

Spread the love

ಬೆಂಗಳೂರು: ಯೋಜನಾ ಪ್ರಾಧಿಕಾರದ ವ್ಯಾಪ್ತಿಯ ಪ್ರದೇಶಗಳಲ್ಲಿ ಸರಳವಾಗಿ ಕೃಷಿ ಭೂಮಿ ಕೃಷಿಯೇತರ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಭೂ ಪರಿವರ್ತನೆ ಮಾಡಿಕೊಡಲು ಸರ್ಕಾರ ಮುಂದಾಗಿದೆ.

ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್‌.ಅಶೋಕ್‌, ಸಾರ್ವಜನಿಕರ ಅನುಕೂಲಕ್ಕಾಗಿ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಜಾರಿಗೊಳಿಸಲಾಗುವುದು.

ಬೆಳಗಾವಿ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂದು ಹೇಳಿದರು.

ಇದರಿಂದ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಲಕ್ಷಾಂತರ ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸಹಕಾರಿಯಾಗಲಿದೆ. ನಗರ ಪ್ರದೇಶದಲ್ಲಿ ಭೂ ಪರಿವರ್ತನೆಗೆ ಅರ್ಜಿ ನೀಡಿದ ಏಳು ದಿನಗಳಲ್ಲಿ ಅರ್ಜಿ ವಿಲೇವಾರಿ ಮಾಡಬೇಕು.ಇಲ್ಲವಾದರೆ 15 ದಿನಗಳಲ್ಲಿ ತನ್ನಿಂತಾನೆ ಮಂಜೂರಾತಿ ಸಿಗಲಿದೆ. ಅದೇ ರೀತಿ ಗ್ರಾಮೀಣ ಭಾಗದಲ್ಲಿ 15 ದಿನಗಳಲ್ಲಿ ವಿಲೇವಾರಿ ಮಾಡದಿದ್ದರೆ ತಿಂಗಳಲ್ಲಿ ಮಂಜೂರಾತಿ ಸಿಕ್ಕಂತಾಗಲಿದೆ ಎಂದು ವಿವರಿಸಿದರು.

ಭೂ ಪರಿವರ್ತನೆ ಕೋರಿ ಅರ್ಜಿ ಸಲ್ಲಿಸುವವರಿಂದ ಪ್ರಮಾಣ ಪತ್ರ ಪಡೆದು ಪರಿವರ್ತನೆ ಮಾಡಿಕೊಡಲಾಗುವುದು. ಸರ್ಕಾರಿ ಜಮೀನು ಆಗಿರಬಾರದು, ಯಾವುದೇ ಯೋಜನೆಗೆ ಸ್ವಾಧೀನ ಮಾಡಿಕೊಂಡಿರಬಾರದು, ಪಿಟಿಸಿಎಲ್‌ ಕಾಯ್ದೆ ವ್ಯಾಪ್ತಿಗೆ ಬಂದಿರಬಾರದು ಎಂಬ ಮುಚ್ಚಳಿಕೆ ಪತ್ರ ಪಡೆಯಲಾಗುವುದು ಎಂದರು.

ಒಂದೊಮ್ಮೆ ಅಂತಹ ಜಮೀನು ಪರಿವರ್ತನೆಗೆ ಅರ್ಜಿ ಹಾಕಿದರೂ ನಮ್ಮಲ್ಲಿನ ಕಾವೇರಿ-2 ತಂತ್ರಾಂಶದಲ್ಲಿ ಆ ಜಮೀನಿನ ಸಾಚಾತನ ಗೊತ್ತಾಗಲಿದೆ. ಇದೇ ರೀತಿ ಬಿಡಿ ಬಿಡಿಯಾಗಿ ಕಂದಾಯ ಭೂಮಿಯಲ್ಲಿ ನಕ್ಷೆ ಅಥವಾ ಬಡಾವಣೆ ಮಂಜೂರಾತಿ ಇಲ್ಲದೆ ನಿವೇಶನ ಪಡೆದವರಿಗೂ ಪರಿವರ್ತನೆ ಮಾಡುವ ಬಗ್ಗೆ ಕಾನೂನಿನ ಅವಕಾಶಗಳ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಹೇಳಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ