ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ಅವರು `ಬಫೂನ್’ ಇದ್ದಂತೆ. ಅವರಿಗೆ ನಾಲಿಗೆ ಮತ್ತು ಮದುಳಿಗೆ ಸಂಪರ್ಕವೇ ಇಲ್ಲದಿದ್ದು, ಏನು ಮಾತನಾಡುತ್ತಾರೋ ಅವರಿಗೆ ಗೊತ್ತಿಲ್ಲ ಎಂದು ಮಾಜಿ ಸಚಿವ, ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಎಂ.ಬಿ.ಪಾಟೀಲ್ ಅವರು ವ್ಯಂಗ್ಯವಾಡಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಳೀನ್ ಕುಮಾರ್ ಕಟೀಲ್ ಅವರು ಏನು ಮಾತನಾಡುತ್ತಾರೋ ಅವರಿಗೆ ಗೊತ್ತಿಲ್ಲ. ನಾಲಿಗೆ-ಮೆದುಳಿಗೆ ಸಂಪರ್ಕವಿಲ್ಲದಂತೆ ಮಾತನಾಡುತ್ತಾರೆ. ಅವರು ಒಂದು ರೀತಿ `ಬಫೂನ್’ ಇದ್ದಂತೆ. ಅವರ ಬಗ್ಗೆ ಚರ್ಚಿಸುವ ಅವಶ್ಯಕತೆಯೇ ಇಲ್ಲ ಎಂದು ಛೇಡಿಸಿದರು.
40% ಹಣೆಪಟ್ಟಿ ಹೊತ್ತಿರುವ ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್ ಪಕ್ಷದಿಂದ ಸದ್ಯ ಯಾರೊಬ್ಬರೂ ಹೋಗುವ ಸ್ಥಿತಿಯಲ್ಲಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 130, ಬಿಜೆಪಿ ಪಕ್ಷ 30 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಬಿಜೆಪಿಯವರ ಸರ್ವೆ ವರದಿಗಳೇ ತಿಳಿಸುತ್ತವೆ. ಹಾಗಾಗಿ ಕಾಂಗ್ರೆಸ್ ಪಕ್ಷದಿಂದ ಒಬ್ಬ ಶಾಸಕರು ಸಹ ಬಿಜೆಪಿ ಪಕ್ಷಕ್ಕೆ ಹೋಗಲ್ಲ
Laxmi News 24×7