Breaking News

ಪತಿಯ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಮಹಿಳೆ ಮನನೊಂದು ಆತ್ಮಹತ್ಯೆ

Spread the love

ಹುಬ್ಬಳ್ಳಿ: ಗ್ರಾಮ ಪಂಚಾಯಿತಿ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಅಲೆದಾಡುತ್ತಿದ್ದ ಪತ್ನಿ ಪುಷ್ಪಾ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಲೂಕಿನ ರಾಯನಾಳ ಬಳಿ ಜುಲೈ 4 ರಂದು ದೀಪಕ್ ಪಠದಾರಿ ಹತ್ಯೆಯಾಗಿತ್ತು.

ದೀಪಕ್‌ ಮತ್ತು ಪುಷ್ಪಾ ಪ್ರೀತಿಸಿ ವಿವಾಹವಾಗಿದ್ದರು. ಇದರಿಂದ ತಮ್ಮ ಕುಟುಂಬದವರೇ ದೀಪಕ್ ಕೊಲೆ ಮಾಡಿರಬಹುದು ಎಂದು ಆರೋಪಿಸಿ ಪುಷ್ಪಾ, ಕುಟುಂಬದವರ ವಿರುದ್ಧ ಪೊಲೀಸ್ ಠಾಣೆ ದೂರು ನೀಡಿದ್ದರು. ಬಳಿಕ ಪತಿಯ ಹತ್ಯೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವ ಮೂಲಕ ಪತಿಯ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ಪುಷ್ಪಾ ಪೊಲೀಸ್‌ ಠಾಣೆ, ಅಧಿಕಾರಿಗಳ ಕಚೇರಿಗಳಿಗೆ ನಿತ್ಯ ಅಲೆದಾಡುತ್ತಿದ್ದರು.

ಕಳೆದ ವಾರವೇ ದೀಪಕ್ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು. ಆದರೆ, ಹುಬ್ಬಳ್ಳಿಯ ನವನಗರದ ಸಂಬಂಧಿಕರ ಮನೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಹತ್ಯೆ ಪ್ರಕರಣದ ತನಿಖೆಯನ್ನು ನಡೆಸುತ್ತಿರುವಾಗಲೇ ಪುಷ್ಪಾ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.


Spread the love

About Laxminews 24x7

Check Also

ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ. ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ

Spread the love ಹುಬ್ಬಳ್ಳಿ: ತಮ್ಮ ಮಗಳನ್ನು ಮದುವೆ ಮಾಡಿಕೊಡುವಂತೆ ಪೀಡಿಸುತ್ತಿದ್ದವನಿಗೆ ಬುದ್ದಿವಾದ ಹೇಳಿದ್ದಕ್ಕೆ ಯುವತಿಯ ತಾಯಿಗೆ ಚಾಕುವಿನಿಂದ ಇರಿದಿದ್ದು, ಚಾಕುವಿನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ