Breaking News
Home / ಜಿಲ್ಲೆ / ಬೆಂಗಳೂರು / P.F.I. ನನ್ನಿಂದಲೇ ಬೆಳೆದಿದ್ದು ಅನ್ನುವುದು ಸುಳ್ಳು: ಸಿದ್ದರಾಮಯ್ಯ ಕಿಡಿ

P.F.I. ನನ್ನಿಂದಲೇ ಬೆಳೆದಿದ್ದು ಅನ್ನುವುದು ಸುಳ್ಳು: ಸಿದ್ದರಾಮಯ್ಯ ಕಿಡಿ

Spread the love

ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್‌ಐ ಮೇಲಿನ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗಿತ್ತು ಎನ್ನುವ ಬಿಜೆಪಿ ಆರೋಪವನ್ನು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

 

“ಸುಳ್ಳು” ಬಿಜೆಪಿ ಮತ್ತು ಸಂಘ ಪರಿವಾರದವರ ಮನೆ ದೇವರು. ಆಧಾರ ರಹಿತ ಸುಳ್ಳು ಪ್ರಚಾರಗಳಿಂದಲೇ ತಮ್ಮ ಅಸ್ತಿತ್ವ ಉಳಿಸಿಕೊಂಡಿರುವ ಈ ಪರಿವಾರ ನನ್ನ ವಿರುದ್ಧ ಇದುವರೆಗೂ ಸಾವಿರದೊಂದು ಸುಳ್ಳುಗಳನ್ನು ಪ್ರಚಾರ ಮಾಡಿದೆ. ಈ ಸುಳ್ಳುಗಳಲ್ಲಿ ಪಿಎಫ್‌ಐ ಸಂಘಟನೆ ನನ್ನಿಂದಲೇ ಬೆಳೆದಿದ್ದು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್‌ಐ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಸಾವಿರ ಸುಳ್ಳುಗಳನ್ನು ಹಿಂದಕ್ಕೆ ಪಡೆದಿದ್ದೇನೆ ಎಂದು ಸುಳ್ಳು ಉದುರಿಸಿಕೊಳ್ಳುತ್ತಾ ತಿರುಗುತ್ತಿದ್ದಾರೆ ಎಂದು ಹೇಳಿದ್ದಾರೆ.

 

ಇದೇ ಆರೋಪವನ್ನು ಈ ಹಿಂದೆಯೂ ಮಾಡಿದ್ದರು. ಆಗಲೇ ನಾನು ಬಿಜೆಪಿ ಸರ್ಕಾರಕ್ಕೆ ಈ ಬಗ್ಗೆ ನಾಲ್ಕು ಪತ್ರಗಳನ್ನು ಬರೆದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್‌ಐ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದೆಯೇ? ಯಾವುದೇ ರಾಜಕೀಯ ಪಕ್ಷ ಮತ್ತು ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿತ್ತೇ ಎನ್ನುವ ಪ್ರಶ್ನೆ ಕೇಳಿದ್ದೆ.ನನ್ನ ಪ್ರಶ್ನೆಗಳಿಗೆ ಬಿಜೆಪಿ ಸರ್ಕಾರವೇ ನೀಡಿರುವ ಉತ್ತರದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಯಾವುದೇ ಪಿಎಫ್‌ಐ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದರ ಬಗ್ಗೆ ಉಲ್ಲೇಖಗಳೇ ಇಲ್ಲ ಎಂದಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದ ಸರ್ಕಾರದ ಅವಧಿಯಲ್ಲಿ ರೈತ, ದಲಿತ, ಕಾರ್ಮಿಕ, ಕಮ್ಯುನಿಸ್ಟ್ ಸಂಘಟನೆಗಳ ಕಾರ್ಯಕರ್ತರು ಮತ್ತು ಮುಖಂಡರುಗಳ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿತ್ತು ಎನ್ನುವ ಬಗ್ಗೆ ಬಿಜೆಪಿ ಸರ್ಕಾರವೇ ಉತ್ತರಿಸಿದೆ. ಕಾಂಗ್ರೆಸ್ ಸರ್ಕಾರ ಹಿಂದಕ್ಕೆ ಪಡೆದ ಪ್ರಕರಣಗಳ ಸ್ವರೂಪ ಮತ್ತು ಘಟನೆಗಳ ಕುರಿತಾಗಿ ಬಿಜೆಪಿ ಸರ್ಕಾರವೇ ನೀಡಿರುವ ಉತ್ತರದ ಕೆಲವೊಂದು ಸ್ಯಾಂಪಲ್‌ಗಳನ್ನು ಮಾತ್ರ ಇಲ್ಲಿ ನೀಡಿದ್ದೇನೆ. ನೂರಾರು ಪುಟಗಳಲ್ಲಿ ಸರ್ಕಾರ ಉತ್ತರ ನೀಡಿದೆ. ಯಾವ ಉತ್ತರದಲ್ಲೂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್‌ಐ ಕಾರ್ಯಕರ್ತರ ಮೇಲಿನ ಮೊಕದ್ದಮೆಗಳ ಉಲ್ಲೇಖವಿಲ್ಲ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ