Breaking News

ಕೋಣೆಯಲ್ಲಿ ಕೂಡಿ ಹಾಕಿ ಬಾಲಕಿ ಮೇಲೆ ಗ್ಯಾಂಗ್​ರೇಪ್​: ಮೂವರು ಆರೋಪಿಗಳು ಅಂದರ್

Spread the love

ಸಿಮ್ಡೆಗಾ (ಜಾರ್ಖಂಡ್): ಜೂನ್ 5 ರಂದು 14 ವರ್ಷದ ಬುಡಕಟ್ಟು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜಾರ್ಖಂಡ್‌ನ ಕೊಲೆಬಿರಾ ಪೊಲೀಸರು ಮಂಗಳವಾರ ಮೂವರನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಹೊಟ್ಟೆನೋವು ಎಂದು ಸದರ್ ಆಸ್ಪತ್ರೆಗೆ ಕರೆದೊಯ್ದ ನಂತರ ಅತ್ಯಾಚಾರ ಎಸೆಗಿರುವುದು ಗೊತ್ತಾಗಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜೂನ್ 5 ರಂದು ಆಕಾಶ್ ಟೆಟೆ, ಅಮನ್ ಡುಂಗ್‌ಡಂಗ್ ಮತ್ತು ಬನ್ಸ್ ಬಹಲ್ ಎಂಬುವರು ಸ್ನೇಹಿತರೊಂದಿಗೆ ಕೋಣೆಗೆ ಬೀಗ ಹಾಕಿ ಅತ್ಯಾಚಾರ ಎಸಗಿದ್ದಾರೆ ಎಂದು ಅಪ್ರಾಪ್ತ ದೂರಿನಲ್ಲಿ ಆರೋಪಿಸಿದ್ದಾಳೆ. ಈ ಬಗ್ಗೆ ಕೊಲೆಬೀರಾ ಪೊಲೀಸ್ ಠಾಣೆ ಪ್ರಭಾರಿ ರಾಮೇಶ್ವರ ಭಗತ್ ಮಾತನಾಡಿದ್ದು, ತಾಚಿತೈತಾಂಗರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೂವರು ಆರೋಪಿಗಳು ಸಂತ್ರಸ್ತೆಗೆ ಈ ಬಗ್ಗೆ ಯಾರಿಗೂ ಹೇಳಬೇಡಿ, ಇಲ್ಲದಿದ್ದರೆ ಕೊಲ್ಲಲಾಗುವುದು ಎಂದು ಬೆದರಿಕೆ ಹಾಕಿದ್ದರು ಎಂದು ಬಾಲಕಿ ದೂರಿನಲ್ಲಿ ಆರೋಪಿಸಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ