ಬೆಂಗಳೂರು: ಕೋವಿಡ್ ನಂತರ ಅದ್ಧೂರಿಯಾಗಿ ನಡೆಯುತ್ತಿರುವ ಮೈಸೂರು ದಸರಾ ಮಹೋತ್ಸವದ ನಿಮಿತ್ತ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಜೊತೆಗೆ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವಿಶೇಷ ಸಾರಿಗೆ ಬಸ್ ಸೇವೆಗಳನ್ನು ಒದಗಿಸಿದ್ದು, ಕಳೆಗುಂದಿರುವ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತಿದೆ
ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸ್ವೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್ ಸಾರಿಗೆ ಸೇವೆಗಳು ಸೇರಿದಂತೆ ದಸರಾ ರಜೆಗಳ ಪಯುಕ್ತ ಕೆಎಸ್ಆರ್ಟಿಸಿ ನಿಗಮದಿಂದ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಅಕ್ಟೋಬರ್ 3 ರವರೆಗೂ ಈ ವಿಶೇಷ ಬಸ್ಗಳ ಸೇವೆ ಇರಲಿದೆ.