Breaking News

ನಾಗರ ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ಉರಗ ರಕ್ಷಕ!

Spread the love

ಶಿವಮೊಗ್ಗ: ನಾಗರ ಹಾವೊಂದಕ್ಕೆ ಮುತ್ತಿಡಲು ಹೋಗಿ ಉರಗ ರಕ್ಷಕನೊಬ್ಬ ತುಟಿಗೆ ಕಚ್ಚಿಸಿಕೊಂಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ.

ಭದ್ರಾವತಿಯ ಅಲೆಕ್ಸ್‌ ಎಂಬವರೇ ನಾಗರಹಾವಿನಿಂದ ಕಚ್ಚಿಸಿಕೊಂಡವರು. ಹಾವನ್ನು ಹಿಡಿದು ಅದಕ್ಕೆ ಮುತ್ತಿಡಲು ಮುಂದಾಗಿದ್ದ ತಕ್ಷಣ ಹಾವು ತಿರುಗಿ ತುಟಿಗೆ ಕಚ್ಚಿದೆ.

 

ಭದ್ರಾವತಿಯ ಅಲೆಕ್ಸ್‌ ಹಾಗೂ ರೋನಿ ಎಂಬುವರು ಉರಗ ರಕ್ಷಣೆಯಲ್ಲಿ ತೊಡಗಿಕೊಂಡಿದ್ದು, ಇತ್ತೀಚೆಗೆ ಭದ್ರಾವತಿಯ ಬೊಮ್ಮನಕಟ್ಟೆ ಮದುವೆ ಮನೆಯಲ್ಲಿ ಎರಡು ನಾಗರ ಹಾವುಗಳು ಒಟ್ಟಿಗೆ ಕಾಣಿಸಿಕೊಂಡಿವೆ. ಈ ವೇಳೆ ಹಾವು ಹಿಡಿದು ಅಲೆಕ್ಸ್‌ ಎಂಬಾತ ಅದಕ್ಕೆ ಮುತ್ತು ಕೊಡಲು ಮುಂದಾಗಿದ್ದಾನೆ. ಈ ವೇಳೆ ಹಾವು ತಿರುಗಿ ತುಟಿಗೆ ಕಚ್ಚಿದೆ. ನಂತರ ಹಾವುಗಳನ್ನು ಕಾಡಿಗೆ ಬಿಟ್ಟು ಭದ್ರಾವತಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ.ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ. ಚಿಕಿತ್ಸೆ ಪಡೆದು ಮನೆಗೆ ವಾಪಾಸ್‌ ಆಗಿರುವ ಅಲೆಕ್ಸ್‌ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇದರ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ