ಹುಮನಾಬಾದ: ಬೀದರ ಜಿಲ್ಲೆಯ ಹುಮನಾಬಾದ ಪಟ್ಟಣದ ಹೊರವಲಯದ ಆರ್.ಟಿ.ಓ. ಕಚೇರಿ ಮೇಲೆ ಸೆ.30ರ ಶುಕ್ರವಾರ ಬೆಳ್ಳಂ ಬೆಳಿಗ್ಗೆ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದೆ.
ಚೆಕ್ ಪೋಸ್ಟ್ ನಲ್ಲಿ ವಾಹನಗಳಿಂದ ಹಣ ವಸೂಲಿ ದೂರುಗಳ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.
ರಾಷ್ಟ್ರೀಯ ಹೆದ್ದಾರಿ 65ರ ಮೋಳಕೆರಾ ಗ್ರಾಮದ ಹತ್ತಿರದ ಚೆಕ್ ಪೋಸ್ಟ್ ನಲ್ಲಿ ದಾಳಿ ನಡೆದಿದೆ.
ವಾಹನಗಳಿಂದ ಸಂಗ್ರಹಿಸುವ ತೆರಿಗೆ ಹಣಕ್ಕೂ ಕಚೇರಿಯಲ್ಲಿ ಸಂಗ್ರಹವಾದ ಹಣಕ್ಕೂ ವ್ಯತ್ಯಾಸ ಇರುವುದು ಕಂಡು ಬಂದಿದೆ ಎನ್ನಲಾಗಿದೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚಿನ ಹಣ ಪತ್ತೆಯಾಗಿದೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಪರಿಶೀಲನೆ ನಂತರ ಖಚಿತ ಪಡಿಸುವುದಾಗಿ ತಿಳಿಸಿದ್ದಾರೆ.
ಬೀದರ್-ಕಲ್ಬುರ್ಗಿ ಎಸ್ಪಿ ಪಿ.ಕರ್ನೂಲ್ ನೇತೃತ್ವದ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದ್ದು, ಕಲಬುರಗಿ ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡಪಾಟೀಲ ಪಾಟೀಲ, ಬೀದರ ಡಿವೈಎಸ್ಪಿ ಎನ್.ಎಂ ಓಲೇಕರ್ ಸೇರಿದಂತೆ ಸುಮಾರ 30ಕ್ಕೂ ಅಧಿಕ ಅಧಿಕಾರಿಗಳು ದಾಳಿಯಲ್ಲಿ ಇರುವ ಬಗ್ಗೆ ತಿಳಿದು ಬಂದಿದೆ.