Breaking News

ಬೆಳಗಾವಿ: ಕೊಗನೊಳ್ಳಿ ಆರ್‌ಟಿಒ ಚೆಕ್​​ ಪೋಸ್ಟ್ ಮೇಲೆ‌ ಲೋಕಾಯುಕ್ತರ ದಾಳಿ

Spread the love

ಚಿಕ್ಕೋಡಿ(ಬೆಳಗಾವಿ): ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹೊರವಲಯದಲ್ಲಿರುವ ಕೋಗನೊಳ್ಳಿ ಆರ್‌ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗಿನಜಾವ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ದಾಳಿಯಲ್ಲಿ ಲಕ್ಷಗಟ್ಟಲೆ ಹಣ ಪತ್ತೆಯಾಗಿದೆ ಎನ್ನಲಾಗಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ಮುಂದುವರೆಸಿದ್ದಾರೆ.

ಹಣ  ವಸೂಲಿ ಆರೋಪ: ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿದ್ದು, ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸಿಸುವ ಪ್ರಮುಖ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿ ಇದಾಗಿದೆ. ರಸ್ತೆ ಪಕ್ಕದಲ್ಲಿರುವ ಆರ್​ಟಿಒ ಚೆಕ್ ಪೋಸ್ಟ್ ಮೂಲಕವೇ ಸಾವಿರಾರು ವಾಹನಗಳು ತಪಾಸಣೆಗೆ ಒಳಪಟ್ಟ ನಂತರವೇ ರಾಜ್ಯಕ್ಕೆ ಪ್ರವೇಶ ನೀಡಲಾಗುತ್ತದೆ.

Thumbnail image

ಮಹಾರಾಷ್ಟ್ರದಿಂದ ಹೋಗುವ ಬರುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಆಗಿರುವುದರಿಂದ ಚೆಕ್ ಪೋಸ್ಟ್ ಮೂಲಕ ಸಾವಿರಾರು ವಾಹನಗಳಿಂದ ಅಧಿಕಾರಿಗಳು ಹಣ ವಸೂಲಿ ಮಾಡುತ್ತಾರೆ ಎಂಬ ದೂರುಗಳು ಕೇಳಿ ಬರುತ್ತಿದ್ದವು. ಹೀಗಾಗಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ‌ದ್ದು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.


Spread the love

About Laxminews 24x7

Check Also

ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ

Spread the love ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ