Breaking News

ಮಠದ ಸಿಬ್ಬಂದಿ ವೇತನ ಚೆಕ್​ಗೆ​ ಸಹಿ ಹಾಕಲು ಮುರುಘಾ ಶರಣರಿಗೆ ಹೈಕೋರ್ಟ್ ಅವಕಾಶ

Spread the love

ಬೆಂಗಳೂರು: ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠ ಮತ್ತು ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ವೇತನ ಪಡೆಯಲಾಗದೇ ತೊಂದರೆಗೆ ಸಿಲುಕಬಾರದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘರಾಜೇಂದ್ರ ಶರಣರಿಂದ ವೇತನ ಪಾವತಿಸುವ ಚೆಕ್​ಗಳಿಗೆ ಸಹಿ ಹಾಕಲು ಅನುಮತಿ ನೀಡಿದೆ.

ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಮಠದ ಬ್ಯಾಂಕ್‌ ಖಾತೆಗಳ ಚೆಕ್‌ಗಳಿಗೆ ಸಹಿ ಹಾಕುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ, ಅರ್ಜಿ ಇತ್ಯರ್ಥಪಡಿಸಿದೆ.

ಮಠದ ವಿದ್ಯಾಪೀಠ ಸಂಸ್ಥೆಗಳ ಉದ್ಯೋಗಿ ಹಾಗೂ ಸಿಬ್ಬಂದಿಗೆ ವೇತನ ನೀಡುವುದಕ್ಕಾಗಿ ಅ. 3, 6 ಮತ್ತು 10ರಂದು ಮಾತ್ರ ಚೆಕ್​ಗಳಿಗೆ ಸಹಿ ಹಾಕಬಹುದು. ಸಹಿ ಪಡೆಯುವ ವ್ಯಕ್ತಿ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು. ಈ ಪ್ರಕ್ರಿಯೆ ವೇಳೆ ತನಿಖಾಧಿಕಾರಿ ಹಾಗೂ ಜೈಲು ಅಧೀಕ್ಷಕರು ಉಪಸ್ಥಿತರಿರಬೇಕು. ಅಲ್ಲದೇ, ಸಹಿ ಮಾಡಿದ ಚೆಕ್​ಗಳ ನಕಲು (ಜೆರಾಕ್ಸ್) ಪ್ರತಿಗಳನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ