Breaking News

ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮ ಪಂಚಾಯ್ತಿಗೆ ಬೀಗ ಜಡಿದ ನೆರೆ ಸಂತ್ರಸ್ತರು

Spread the love

ಬೆಳಗಾವಿ: ಅತಿವೃಷ್ಠಿಯಿಂದ ಹಾನಿಯಾದ ಮನೆಗಳ ಸಮೀಕ್ಷೆ ‌ಅಸಮರ್ಪವಾಗಿದ್ದು, ಪರಿಹಾರ‌ ವಿತರಣೆ ವೇಳೆ ತಾರತಮ್ಯ ‌ಮಾಡಲಾಗುತ್ತಿದೆ ಎಂದು ಆರೋಪಿಸಿ ನೆರೆ ಸಂತ್ರಸ್ತರು ‌ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಅತಿವೃಷ್ಠಿಗೆ ಮೂಡಲಗಿ ತಾಲೂಕಿನಲ್ಲಿ ಸಾಕಷ್ಟು ಮನೆಗಳಿಗೆ ಹಾನಿ ಆಗಿದೆ. ಘಟಪ್ರಭಾ ನದಿ ಪಾತ್ರದಲ್ಲಿರುವ ಜನರು ಮೂರು ವರ್ಷಗಳಿಂದ‌ ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರವಾಹಕ್ಕೆ ತುತ್ತಾದ ಮನೆಗಳ ಸಮೀಕ್ಷೆ ವೇಳೆ ತಾರತಮ್ಯ ಆರೋಪದ ಹಿನ್ನೆಲೆ ಹುಣಶ್ಯಾಳ ‌ಪಿಜಿ ಗ್ರಾಮಸ್ಥರು ‌ಗ್ರಾಮ ಪಂಚಾಯಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ದಲ್ಲಾಳಿಗಳ ಹಾವಳಿಗೆ ಅರ್ಹ ಫಲಾನುಭವಿಗಳಿಗೆ ಪರಿಹಾರ ಸಿಗ್ತಿಲ್ಲ.‌ ತಮಗೆ ಬೇಕಾದವರಿಗೆ ಮಾತ್ರ ಹಣ ಪಡೆದು ಎ. ಬಿ ಕೆಟಗೇರಿ ಹಾಕಿ ಶಿಫಾರಸು ಮಾಡಲಾಗಿದೆ. ಅರ್ಹ ಫಲಾನುಭವಿಗಳಿಗೆ ಪರಿಹಾರ ವಿತರಣೆ ಮಾಡ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ನಿರೀಕ್ಷಕ‌ರು ಸಂತ್ರಸ್ತರ ಮನವೊಲಿಸುವ ಯತ್ನಿಸಿದ್ದಾರೆ. ಕಂದಾಯ ನಿರೀಕ್ಷಕರ ಜೊತೆಗೆ ಪ್ರತಿಭಟನಾ ನಿರತರು ವಾಗ್ವಾದಕ್ಕೆ ಇಳಿದರು. ಗ್ರಾಪಂ ಸದಸ್ಯರು, ಗ್ರಾಪಂ ಸಿಬ್ಬಂದಿಯನ್ನು ಸಂತ್ರಸ್ತರು ತರಾಟೆಗೆ ತೆಗೆದುಕೊಂಡರು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ