Breaking News
Home / ಜಿಲ್ಲೆ / ಬೆಳಗಾವಿ / ರಾಯಬಾಗ :A.T.M.ಕಳವು ಯತ್ನ: ಆರೋಪಿ ಬಂಧನ

ರಾಯಬಾಗ :A.T.M.ಕಳವು ಯತ್ನ: ಆರೋಪಿ ಬಂಧನ

Spread the love

ರಾಯಬಾಗ: ತಾಲ್ಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ಎಟಿಎಂ ಒಡೆಯಲು ಯತ್ನಿಸಿದ ಆರೋ‍ಪಿಯನ್ನು ಎಂಟು ತಿಂಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ.

ಬಾವಾನಸೌದತ್ತಿ ನಿವಾಸಿ ಖಾಜಾಸಾಬ್‌ ಬಾಬಾಸಾಬ್‌ ಮುಜಾವರ (25) ಬಂಧಿತ. 2022ರ ಫೆಬ್ರುವರಿ 4ರಂದು ರಾತ್ರಿ ಎಟಿಎಂ ಮುರಿದು ಕಳ್ಳತನಕ್ಕೆ ಯತ್ನಿಸಿದ ಯುವಕ ತಲೆ ಮರೆಸಿಕೊಂಡಿದ್ದ.

ಕಬ್ಬಿಣದ ರಾಡ್‌ ಬಳಸಿ ಎಟಿಎಂ ಮುರಿಯಲು ಯತ್ನಿಸಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಆದರೆ, ಆರೋಪಿ ಗುರುತು ಸರಿಯಾಗಿ ಪತ್ತೆಯಾಗಿರಲಿಲ್ಲ.

ಪ್ರಕರಣದ ತನಿಖೆ ಕೈಗೊಂಡ ರಾಯಬಾಗ ಪೊಲೀಸರು ಬೆರಳಿನ ಗುರುತುಗಳನ್ನು ಪರೀಕ್ಷಿಸಿ, ಅದರ ಆಧಾರದಲ್ಲಿ ಆರೋಪಿಯನ್ನು ಬಂಧಿಸಿದರು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.


Spread the love

About Laxminews 24x7

Check Also

ಜನತಾ ದರ್ಶನಕ್ಕೆ ಜನಸಾಗರ: ಸಮಸ್ಯೆ ಆಲಿಸಿದ ಅಧಿಕಾರಿಗಳು, ಶಾಸಕರು

Spread the loveಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ನಡೆದ ಜನತಾ ದರ್ಶನದಲ್ಲಿ ಜಿಲ್ಲೆಯ ವಿವಿಧೆಡೆಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ