Breaking News

ನಿಪ್ಪಾಣಿ: ಡೆಂಗಿಯಿಂದ ಯುವಕ ಸಾವು

Spread the love

ನಿಪ್ಪಾಣಿ (ಬೆಳಗಾವಿ ಜಿಲ್ಲೆ): ಡೆಂಗಿಯಿಂದ ಬಳಲುತ್ತಿದ್ದ ತಾಲ್ಲೂಕಿನ ಕಾರದಗಾ ಗ್ರಾಮದ ಯುವಕ ಶುಕ್ರವಾರ ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಪ್ರೇಮ್ ಸಂಜಯ ಕಮತೆ (19) ಸಾವನ್ನಪ್ಪಿದವರು.

ಬಿಎಸ್ಪಿ ಓದುತ್ತಿದ್ದ ಪ್ರೇಮ್ ಎಂಟು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದರು.

ಗಡಿಗೆ ಹೊಂದಿಕೊಂಡ ಮಹಾರಾಷ್ಟ್ರದ ಇಚಲಕರಂಜಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಡೆಂಗಿ ತಗಲಿದ್ದು ಖಚಿತವಾಗಿತ್ತು.

ಶುಕ್ರವಾರ ಆರೋಗ್ಯ ಹಠಾತ್ ಕ್ಷೀಣಿಸಿ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು ಕುಟುಂಬದ ಮೂಲಗಳು ತಿಳಿಸಿವೆ.

ಯುವಕನ ಸಾವಿನಿಂದ ಗ್ರಾಮದಲ್ಲಿ ಡೆಂಗಿ ಭೀತಿ ಆವರಿಸಿದೆ. ಜ್ವರ ಕಾಣಿಸಿಕೊಂಡ ಮತ್ತೆ ಕೆಲವರು ಆಸ್ಪತ್ರೆಗೆ ದೌಡಾಯಿಸಿ ತಪಾಸಣೆಗೆ ಒಳಗಾದರು.


Spread the love

About Laxminews 24x7

Check Also

ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ‌ಭವನದಲ್ಲಿ ಆಯೋಜಿಸಲಾಗಿದೆ

Spread the loveಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ