Breaking News
Home / ಜಿಲ್ಲೆ / ಬಿಜಾಪುರ / ಕೋವಿಡ್ ನಂತರ ಬಲಿಷ್ಠ ಭಾರತ ನಿರ್ಮಾಣವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಕೋವಿಡ್ ನಂತರ ಬಲಿಷ್ಠ ಭಾರತ ನಿರ್ಮಾಣವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Spread the love

ವಿಜಯಪುರ : ಕೋವಿಡ್ ನಂತರದ ಭಾರತಕ್ಕೆ ವಿಶ್ವದಲ್ಲೇ ವಿಶೇಷ ಸ್ಥಾನ, ವಿಶೇಷ ಗುರುತಿಸುವಿಕೆ ಆರಂಭಗೊಂಡಿದೆ. 21ನೇ ಶತಮಾನದಲ್ಲಿ ಬಲಿಷ್ಠ ಭಾರತ ಕಟ್ಟುವ ಕನಸು ಪ್ರಧಾನಿ ನರೇಂದ್ರ ಮೋದಿ ಅವರಿಂದ ನನಸಾಗಿದೆ. ಯುಎನ್ ಸಾಮಾನ್ಯ ಸಭೆಯಲ್ಲಿ ಭಾರತದ ಪ್ರಾತಿನಿಧ್ಯವಿಲ್ಲದೇ ಯಾವ ಸಭೆಗಳೂ ನಡೆಯುವುದಿಲ್ಲ.

ಅಷ್ಟರ ಮಟ್ಟಿಗೆ ಭಾರತ ವಿಶ್ವಕ್ಕೆ ಅನಿವಾರ್ಯ ಎನಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಶುಕ್ರವಾರ ನಗರದ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ ಮಾಡಿ, ವಿಜಯಪುರ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೋವಿಡ್ ನಂತರದಲ್ಲಿ ವಿಶ್ವದಲ್ಲೇ ಈ ಸಾಂಕ್ರಾಮಿಕ ರೋಗಮುಕ್ತಗೊಳಿಸಿ, ದೇಶದ 200 ಕೋಟಿ ಜನರಿಗೆ ಲಸಿಕೆ ನೀಡುವ ಮೂಲಕ ಭಾರತ ಅಭಿವೃದ್ಧಿ ಹೊಂದಿದ ದೇಶಗಳ ಸಾಲಿನಲ್ಲಿ ವಿಶ್ವದಲ್ಲೇ ಮುಂಚೂಣಿಯಲ್ಲಿದೆ. ಸಂಪೂರ್ಣ ಪ್ರಗತಿ ಹೊಂದಿ 3 ಕೋಟಿ ಜನಸಂಖ್ಯೆಯುಳ್ಳ ರಾಷ್ಟ್ರಗಳು ಜನತೆಗೆ ಕೋವಿಡ್ ವ್ಯಾಕ್ಸಿನ್ ಒದಗಿಸಲು ಸಾಧ್ಯವಾಗಿಲ್ಲ, ಪ್ರಧಾನಿ ನರೇಂದ್ರ ಮೋದಿ ಸಮರ್ಥ ನಾಯಕತ್ವದಲ್ಲಿ ಭಾರತ 200 ಕೋಟಿ ವ್ಯಾಕ್ಸಿನ್ ನೀಡುವ ಮೂಲಕ ದೇಶವನ್ನು ಸುರಕ್ಷಿತವಾಗಿರಿಸಲು ಸಾಧ್ಯವಾಗಲಿದೆ ಎಂದರು.

ಇದೀಗ ಭಾರತ ಸೂಪರ್ ಪವರ್ ರಾಷ್ಟ್ರವಾಗಿ ರೂಪುಗೊಂಡಿದ್ದು, ಆರೋಗ್ಯ ಕ್ಷೇತ್ರದಲ್ಲಿ ವಿಶ್ವದಲ್ಲೇ ಮುಂಚೂಣಿಯಲ್ಲಿದೆ. ದೇಶದ ಜನತೆಗೆ ಅತ್ಯುತ್ತಮ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಪ್ರತಿ ವರ್ಷ 50-90 ಸಾವಿರ ವೈದ್ಯಕೀಯ ಪದವೀಧರರು ಸೇವೆಗೆ ಲಭ್ಯವಾಗುತ್ತಿದ್ದಾರೆ. ಈ ಸಂಖ್ಯೆಯನ್ನು ಇನ್ನೂ ಹೆಚ್ಚಿಸುವ ಮೂಲಕ ದೇಶದಲ್ಲಿ ವೈದ್ಯರ ಕೊರತೆ ನೀಗಲು ಪ್ರತಿ 3 ಜಿಲ್ಲೆಗಳಿಗೆ ಒಂದರಂತೆ ವೈದ್ಯಕೀಯ ಕಾಲೇಜು ಆರಂಭಿಸುವ ಯೋಜನೆ ಅನುಷ್ಠಾನದಲ್ಲಿದೆ ಎಂದರು.

ದೇಶದಲ್ಲಿ 11595 ವೆಲ್‍ನೆಸ್ ಕೇಂದ್ರಗಳನ್ನು ತರೆಯುವ, 2359 ರಲ್ಲಿ 2200 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಅಗತ್ಯ ವೈದ್ಯಕೀಯ ಮೂಲ ಭೂತ ಸೌಲಭ್ಯಗಳ ಸಹಿತ ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದರು.

ಈ ಹಿಂದಿನ ದೇಶಗೊಕ್ಕೆ ನುಗ್ಗುತ್ತಿದ್ದ ವಿದೇಶಿ ಭಯೋತ್ಪಾದಕರು ಬಾಂಬ್ ಹಾಕುವ ಕಾಲವಿತ್ತು. ಆದರೆ ಈಗ ಬಾಂಬ್ ಹಾಕುವವರನ್ನು ಅಲ್ಲಿಯೇ ಕತ್ತರಿಸುವ ಕೆಲಸ ನಡೆಯುತ್ತಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುರಕ್ಷಿತ ಭಾರತವಾಗಿ ಪರಿವರ್ತನೆಯಾಗಿದೆ ಎಂದರು.


Spread the love

About Laxminews 24x7

Check Also

ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ

Spread the love ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ