Breaking News

ಖರ್ಗೆ ಅಧ್ಯಕ್ಷರಾದರೂ ರಿಮೋಟ್‌ ಕಂಟ್ರೋಲ್‌ನಲ್ಲೇ ಇರಬೇಕು: ಜೋಶಿ

Spread the love

ವಿಜಯಪುರ: ಎಐಸಿಸಿ ಅಧ್ಯಕ್ಷರು ಯಾರೇ ಆದರೂ ರಿಮೋಟ್‌ ಕಂಟ್ರೋಲ್‌ನಲ್ಲೇ ಕೆಲಸ ಮಾಡಬೇಕು. ಹೀಗಾಗಿ ರಾಜ್ಯದವರಾದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದರೂ ಆ ಸ್ಥಾನಕ್ಕೆ ಅರ್ಥ, ಘನೆತೆಯೇ ಬರುವುದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

 

ನಗರದ ಸೈನಿಕ ಶಾಲಾ ಆವರಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡಿದರೂ ಯಾವುದೇ ವಿಶೇಷತೆ ಇಲ್ಲ. ಕಾಂಗ್ರೆಸ್‌ನಲ್ಲಿ ಯಾರೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದರೂ ರಿಮೋಟ್‌ ಕಂಟ್ರೋಲ್‌ನಲ್ಲೇ ಇರಬೇಕು.

ದಶಕಗಳ ಕಾಲ ದೇಶದ ಪ್ರಧಾನಿ ಆಗಿದ್ದ ಮನಮೋಹನಸಿಂಗ್‌ ಆಡಳಿತವನ್ನು ದೇಶದ ಜನತೆ ಕಣ್ಣಾರೆ ಕಂಡಿದ್ದಾರೆ. ರಾಜಕೀಯ ಗಂಭೀರತೆ ಇಲ್ಲದ ರಾಹುಲ್‌ ಗಾಂಧಿ  ಜವಾಬ್ದಾರಿ ಇಲ್ಲದ ವ್ಯಕ್ತಿ. ಇಂತಹ ವ್ಯಕ್ತಿ ಭಾರತ ಜೋಡೋ ಎಂದು ಪಾದಯಾತ್ರೆ ಹೊರಟರೆ ಜನತೆ ಸ್ಪಂದಿಸಲು ಸಾಧ್ಯವಿಲ್ಲ. ರಾಜಕೀಯ ಲಾಭಕ್ಕಾಗಿ ನಡೆಸುವ ಇಂಥ ಬೆಳವಣಿಗೆಗೆ ಜನರು ಮರುಳಾಗಲ್ಲ ಎಂದು ಹೇಳಿದರು.

 


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ