Breaking News

ಪ್ರತಿ ಶನಿವಾರ ದಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ

Spread the love

ಗೋಕಾಕ : ಸದ್ದಿಲ್ಲದೆ, ಯಾವುದೇ ರೀತಿಯ ಪ್ರಚಾರ ಬಯಸದೆ ನಿಸ್ವಾರ್ಥ ಸೇವೆಯಿಂದ ಜನತೆಯ ಮನದಲ್ಲಿ ಮನೆ ಮಾಡಿದ್ದಾರೆ ಸಾಹುಕಾರ್ ಮನೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ.
ಹೌದು ಸಂತೋಷ ಜಾರಕಿಹೊಳಿ ಅವರು ಸಾಕಷ್ಟು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಅನೇಕ ಸಾಮಾಜಿಕ ಕಾರ್ಯಗಳನ್ನು ಸದ್ದಿಲ್ಲದೆ ಮಾಡಿದ್ದಾರೆ.

ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಖನಗಾವ್ ಗ್ರಾಮದ ಗಿಳಿಹೊಸುರ್ ಹನುಮಂತನ ದೇವಸ್ಥಾನದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

 

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಈ ಅನ್ನ ಸಂತರ್ಪಣೆ ಕಾರ್ಯವು ಜಿಲ್ಲಾದ್ಯಂತ ನಡೆಯುತ್ತಿದ್ದು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದ್ದು ಈ ಸೇವೆ ನಿರಂತರವಾಗಿರಲಿ, ಬಡವರ ಸೇವೆಗೆ ಮುಂದಾಗಿರುವುದು ದಾನ-ಧರ್ಮ-ಸಾಮಾಜಿಕ ಸೇವೆ ಒಳ್ಳೆಯ ಕಾರ್ಯವನ್ನು ಸಂತೋಷ ಜಾರಕಿಹೊಳಿ ಅವರು ಮಾಡುತ್ತಿರುವುದು ಈ ಕಾರ್ಯ ರಾಜ್ಯದಾದ್ಯಂತ ಹೆಮ್ಮರವಾಗಿ ಬೆಳೆಯಬೇಕು ಎಂದು ಊರಿನ ಹಿರಿಯರು ಆಶಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖಂಡರಾದ ದೊಡ್ಡೇರಪ್ಪ ಬುಳ್ಳಿ, ಪುಂಡಲೀಕ್ ಡಬ್ಬನವರ, ಶಿವರಾಜ ಸಣ್ಣಪ್ಪನವರ, ನರಸಿಂಗಪ್ಪ ಹಗೆದಾಲ, ಕೆಂಚಪ್ಪ ಪೂಜೇರಿ ಉಪಸ್ಥಿತರಿದ್ದರು.

 

https://www.instagram.com/p/CjKVi6_Djo1/?igshid=YmMyMTA2M2Y=

 


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ