Breaking News
Home / ರಾಜಕೀಯ / ಮೈಸೂರು ಅರಮನೆ; ಇತಿಹಾಸ, ನಿರ್ಮಾಣ ಖರ್ಚು, ವಿನ್ಯಾಸ ಸೇರಿದಂತೆ ಸಂಪೂರ್ಣ ವಿವರ ಇಲ್ಲಿದೆ

ಮೈಸೂರು ಅರಮನೆ; ಇತಿಹಾಸ, ನಿರ್ಮಾಣ ಖರ್ಚು, ವಿನ್ಯಾಸ ಸೇರಿದಂತೆ ಸಂಪೂರ್ಣ ವಿವರ ಇಲ್ಲಿದೆ

Spread the love

ತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ವಿಶ್ವದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಮೈಸೂರು ಅರಮನೆ ಮೈಸೂರು ದಸರಾದ ಕೇಂದ್ರ ಬಿಂದುವಾಗಿದೆ. ವರ್ಷಪೂರ್ತಿ ಪ್ರವಾಸಿಗರಿಂದ ತುಂಬಿ ತುಳುಕುವ ಅರಮನೆ ದಸರಾ ಬರುತ್ತಿದ್ದಂತೆಯೇ ಥೇಟ್ ಇಂದ್ರನ ಅಮರಾವತಿಯಾಗಿ ಬಿಡುತ್ತದೆ.

 

ಮೈಸೂರು ದಸರಾದ ಪ್ರಮುಖ ವಿಧಿ ವಿಧಾನಗಳು ಇಲ್ಲಿಯೇ ನಡೆಯುತ್ತದೆ. ಖಾಸಗಿ ದರ್ಬಾರ್ ರಾಜವೈಭವಕ್ಕೆ ಸಾಕ್ಷಿಯಾಗಿದೆ. ಯಾರೇ ಆಗಲಿ ಮೈಸೂರು ಅರಮನೆ ನೋಡುತ್ತಿದ್ದಂತೆಯೇ ಇತಿಹಾಸವನ್ನು ಮೆಲುಕು ಹಾಕುವ ಪ್ರಯತ್ನ ಮಾಡುತ್ತಾರೆ. ಮೈಸೂರು ಸಂಸ್ಥಾನದ ಸುಮಾರು 25 ರಾಜರ, 550 ವರ್ಷಗಳ ರಾಜವೈಭವಕ್ಕೆ ಮೈಸೂರು ಅರಮನೆ ಸಾಕ್ಷಿಯಾಗಿದೆ.

 

ಇವತ್ತು ನಿರ್ಮಾಣವಾಗಿರುವ ಅರಮನೆಗೂ ಮುನ್ನ ಕಟ್ಟಿಗೆ ಮತ್ತು ಇಟ್ಟಿಗೆಗಳಿಂದ 1800 ಮತ್ತು 1808ರ ಅವಧಿಯಲ್ಲಿ ಕಟ್ಟಲಾಗಿದ್ದ ಅರಮನೆಯಿತ್ತು. ಅದು ಆಕಸ್ಮಿಕವಾಗಿ ಅಗ್ನಿಗೆ ಆಹುತಿಯಾದ ಬಳಿಕ ನಿರ್ಮಾಣವಾದ ಅರಮನೆಯೇ ಈಗಿನ ಭವ್ಯ ಅರಮನೆಯಾಗಿದೆ. ಈ ಅರಮನೆಯನ್ನು 1897 ರಿಂದ 1911-12ರವರೆಗೆ ಸುಮಾರು 41,47,912 ರೂಪಾಯಿ ವೆಚ್ಚದಲ್ಲಿ ಕಟ್ಟಲಾಗಿದೆ. ಇದರ ಸುತ್ತಳತೆ 74.50 ಮೀ ಉದ್ದ ಹಾಗೂ 47.50 ಮೀಟರ್ ಅಗಲವಾಗಿದೆ. ಅರಮನೆಯ ಮುಖ್ಯ ಕಟ್ಟಡವನ್ನು ಕಂದು ಬಣ್ಣದ ದಪ್ಪ ಸ್ಪಟಿಕದ ಗಟ್ಟಿ ಶಿಲೆಗಳಿಂದ ನಿರ್ಮಿಸಲಾಗಿದೆ. ಅರಮನೆಯ ಮಧ್ಯಭಾಗದ ಐದು ಅಂತಸ್ತಿನ ಬಂಗಾರದ ಗಿಲೀಟಿನ ಗಗನಚಂಬಿ ಗೋಪುರವು ಭೂಮಿಯಿಂದ ಸುಮಾರು 145 ಅಡಿ ಎತ್ತರದಲ್ಲಿದೆ.

ಅರಮನೆಯು ಬೆಳಕಿಗೆ ಬಿಟ್ಟಿರುವ ಅಂಗಳದ (ತೊಟ್ಟಿ) ಸುತ್ತಲೂ ಕಟ್ಟಲ್ಪಟ್ಟಿದೆ. ಈ ತೊಟ್ಟಿಯ ಪೂರ್ವಭಾಗಕ್ಕೆ 21 ಅಡಿ ಅಗಲ ಹಾಗೂ 66 ಅಡಿ ಎತ್ತರವಿರುವ ಆಕರ್ಷಕ ಆನೆಯ ಬಾಗಿಲಿದೆ. ದೊಡ್ಡ ಅಂಗಳದಲ್ಲಿ ಹೊರಗಡೆ ಸಜ್ಜೆಗೆ ಹೋಗುವ 15 ಅಡಿ ಅಗಲವುಳ್ಳ ದಾರಿಗಳು ದೊಡ್ಡ ಚೌಕದ ಹಾಗೆ ಕಾಣುತ್ತವೆ. ಇನ್ನು ಎರಡನೆ ಅಂತಸ್ತಿನಲ್ಲಿ ಪೂರ್ವ ಭಾಗಕ್ಕೆ 155 ಅಡಿ ಅಗಲವಿರುವ ವಿಶಾಲ ರಾಜ ಸಭಾಮಂದಿರವಿದೆ. ಅದರ ಮೇಲೆ ಖಾಸಗಿ ನಿವಾಸಿ ಸ್ಥಳಗಳಿವೆ.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ