Breaking News

ಭರ್ತಿಯಾಗಿ ಕೋಡಿ ಬಿತ್ತು ನಟ ಯಶ್ ಅಭಿವೃದ್ಧಿಪಡಿಸಿದ್ದ ತಲ್ಲೂರು ಕೆರೆ

Spread the love

ಕೊಪ್ಪಳ: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಕೋಡಿ ಬಿದ್ದಿದೆ. ನಟ ರಾಕಿಂಗ್ ಸ್ಟಾರ್ ಯಶ್ ಅವರು 2016 ರಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಹೂಳು ತೆಗೆಸಿ ಕೆರೆ ಅಭಿವೃದ್ಧಿಪಡಿಸಿದ್ದರು.

ಸುಮಾರು 96 ಎಕರೆ ವಿಸ್ತೀರ್ಣದ ಕೆರೆಯಿಂದ 1038 ಎಕರೆ ಜಮೀನಿಗೆ ನೀರಾವರಿ ಕಲ್ಪಿಸಲಾಗುತ್ತದೆ.

ಕಳೆದೆರಡು ದಿನಗಳಿಂದ ಭಾರಿ ಮಳೆಯಾಗಿ ಕೆರೆ ತುಂಬಿ ಕೋಡಿ ಬಿದ್ದಿದೆ. ಜಲಪಾತದಂತೆ ಕೋಡಿ ನೀರು ಭೋರ್ಗರೆಯುತ್ತಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಈ ದೃಶ್ಯ ಕಣ್ತುಂಬಿಕೊಳ್ಳಲು ಹೆಚ್ಚಿನ ಜನ ಬರುತ್ತಿದ್ದಾರೆ. 14 ವರ್ಷಗಳ ನಂತರ ಕೆರೆ ಕೋಡಿ ಬಿದ್ದಿದೆ. ಕೆರೆಗೆ ಹೆಚ್ಚಿನ ಒಳಹರಿವು ಇರುವುದರಿಂದ ಕೋಡಿ ಕಟ್ಟೆ ತುಂಬಿ ನೀರು ಹರಿಯುತ್ತಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ