Breaking News

ಮಕ್ಕಳ ಅಶ್ಲೀಲ ದೃಶ್ಯ ಚಿತ್ರೀಕರಿಸಿ, ಸೋಶಿಯಲ್​ ಮೀಡಿಯಾಕೆ ಹರಿಬಿಡುತ್ತಿದ್ದ ಭೂಪ.!

Spread the love

ಶಿವಮೊಗ್: ಸೊರಬ ತಾಲ್ಲೂಕಿನ ವಾಸಿಯಾದ ತಿಮ್ಮಪ್ಪ ಎಂಬ 42 ವರ್ಷದ ವಯಸ್ಸಿನ ವ್ಯಕ್ತಿಯು ಅಪ್ರಾಪ್ತ ವಯಸ್ಸಿನ ಬಾಲಕರ ಅಶ್ಲೀಲ ವೀಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುತ್ತಿದ್ದ.ಈ ಬಗ್ಗೆ ಸೈಬರ್ ಟಿಪ್ ಲೈನ್ ನಿಂದ ಬಂದ ದೂರಿನ ಮೇರೆಗೆ 12-01-2020 ರಂದು ಶಿವಮೊಗ್ಗ ಜಿಲ್ಲೆಯ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಐಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು.

 

 

ಈ ಸಂಬಂಧ ತನಿಖೆ ನಡೆಸಿದ್ದ ತನಿಖಾಧಿಕಾರಿ ಗುರುರಾಜ್‌, ಕೆ.ಟಿ, ಪಿಐ, ಸಿಇಎನ್‌ ಪೊಲೀಸ್‌ ಠಾಣೆ, ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.ಸದ್ಯ ಪ್ರಕರಣ ಸಂಬಂಧ ತೀರ್ಪು ಹೊರಬಿದ್ದಿದೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಶ್ರೀಹರಿಪ್ರಸಾದ್ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.ಇನ್ನೂ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು.ಈ ಪ್ರಕರಣದಲ್ಲಿ ಜಡ್ಜ್​​ ಲತಾ ರವರು ಇವತ್ತು ತೀರ್ಪು ನೀಡಿದ್ದಾರೆ.

 

20 ವರ್ಷ ಶಿಕ್ಷೆ!

ಆರೋಪಿ ತಿಮ್ಮಪ್ಪನ ವಿರುದ್ಧ ಪೋಕ್ಸೋ ಮತ್ತು ಐಟಿ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಟ್ಟು 1,44,000/- ರೂ ದಂಡ ವಿಧಿಸಿದ್ದಾರೆ.ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 3 ವರ್ಷಗಳ ಕಾಲ ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿದ್ದಾರೆ.


Spread the love

About Laxminews 24x7

Check Also

ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ

Spread the loveಸವದತ್ತಿ; ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ ಧಾರವಾಡದ ಮುರುಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ