Home / ಜಿಲ್ಲೆ / ಬೆಂಗಳೂರು / A.I.C.C. ಅಧ್ಯಕ್ಷಗಾದಿ ಅಲಂಕರಿಸುತ್ತಾರಾ ಎರಡನೇ ಕನ್ನಡಿಗ, ದಲಿತ ನಾಯಕ ಖರ್ಗೆ !

A.I.C.C. ಅಧ್ಯಕ್ಷಗಾದಿ ಅಲಂಕರಿಸುತ್ತಾರಾ ಎರಡನೇ ಕನ್ನಡಿಗ, ದಲಿತ ನಾಯಕ ಖರ್ಗೆ !

Spread the love

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಕೊನೆಗೂ ಗಾಂಧಿ ಕುಟುಂಬದ ಪ್ರಾಬಲ್ಯ ತಾತ್ಕಾಲಿಕವಾಗಿ ಅಂತ್ಯಕಾಣುವ ಸಾಧ್ಯತೆ ಗೋಚರಿಸುತ್ತಿದ್ದು, ಪಕ್ಷದ ಅಧ್ಯಕ್ಷಗಾದಿಗೆ ಸ್ಪರ್ಧಿಸಿದವರಲ್ಲಿ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಸರ್ವೋಚ್ಛ ಸ್ಥಾನಕ್ಕೆ ಏರುವ ಸಾಧ್ಯತೆ ಹೆಚ್ಚಾಗಿ ಗೋಚರಿಸುತ್ತಿದೆ.

ಕಾಂಗ್ರೆಸ್‌ನ ಅಧ್ಯಕ್ಷೀಯ ಚುನಾವಣೆಗೆ ಶುಕ್ರವಾರ ನಾಮಪತ್ರ ಸಲ್ಲಿಸಿರುವ ಮಲ್ಲಿಕಾರ್ಜುನ ಖರ್ಗೆ ಜತೆ ರಾಷ್ಟ್ರೀಯ ನಾಯಕ ಶಶಿ ತರೂರ್ ಸಹ ಪ್ರಬಲ ಸ್ಪರ್ಧಿ. ಖರ್ಗೆ ಅಧ್ಯಕ್ಷರಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಕಡೆಯ ಕ್ಷಣದಲ್ಲಿ ಸ್ಪರ್ಧಾ ಕಣಕ್ಕಿಳಿದಿರುವ ಖರ್ಗೆ ಆಯ್ಕೆಯಾದರೆ ರಾಜ್ಯದಿಂದ ಎಐಸಿಸಿ ಅಧ್ಯಕ್ಷಗಾದಿಗೆ ಏರಿದ ಎರಡನೇ ಕನ್ನಡಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ.

ಅಲ್ಲದೇ ಒಬ್ಬ ದಲಿತ ಸಮುದಾಯದ ವ್ಯಕ್ತಿ ಅಧ್ಯಕ್ಷಗಾದಿಗೆ ಏರುವ ಮೂಲಕ ತಳ ಸಮುದಾಯದ ನಾಯಕನಿಗೆ ಪಕ್ಷದ ಉನ್ನತ ಸ್ಥಾನ ನೀಡಿದ ಹೆಗ್ಗಳಿಕೆಯೂ ಕಾಂಗ್ರೆಸ್​ನದ್ದಾಗಲಿದೆ. ವಿಶೇಷ ಅಂದರೆ ಬಾಬು ಜಗಜೀವನ್ ರಾಮ್ ನಂತರ ಈ ಹುದ್ದೆಯನ್ನು ಅಲಂಕರಿಸುವ ದಲಿತ ನಾಯಕ ಎಂಬ ಹೆಗ್ಗಳಿಕೆ ಹೊಂದಲಿದ್ದಾರೆ. ಗಾಂಧಿ ಕುಟುಂಬಕ್ಕೆ ನಿಷ್ಠರಾಗಿರುವುದು ಇವರ ಆಯ್ಕೆಗೆ ಇನ್ನೊಂದು ಕಾರಣವಾಗಲಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಅತ್ಯಂತ ಜನಪ್ರಿಯ ನಾಯಕರಾಗಿ ಸೋಲಿಲ್ಲದ ಸರದಾರನಾಗಿ ಮೆರೆದಿದ್ದ ಖರ್ಗೆ 2019ರ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದರು. ನಂತರ ರಾಜ್ಯಸಭೆಗೆ ಆಯ್ಕೆಯಾಗಿ ಹಾಲಿ ಪ್ರತಿಪಕ್ಷ ನಾಯಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯಕ್ಕೆ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಮಾತು ಸಾಕಷ್ಟು ಸಾರಿ ಕೇಳಿಬಂದಿತ್ತು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ