Breaking News

ತಡರಾತ್ರಿ ಹಿಂಡಲಗಾ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ಬೆಳಗಾವಿ: ಇಲ್ಲಿನ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 3 ತಿಂಗಳ ಹಿಂದೆ ಪೋಕ್ಸೋ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿತ್ತು.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದ ಮಂಜುನಾಥ ಮಹಾಂತೇಶ ನಾಯ್ಕರ (20) ನೇಣಿಗೆ ಶರಣಾಗಿರುವ ಕೈದಿ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಕಳೆದ ಮೂರು ತಿಂಗಳಿಂದಲೂ ಆರೋಪಿ ಹಿಂಡಲಗಾ ಜೈಲಿನಲ್ಲಿದ್ದನು.

ಶನಿವಾರ ತಡರಾತ್ರಿ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ