Breaking News

ಅವರು ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದು: ಡಿಕೆಶಿ ಕಣ್ಣೀರಿಗೆ ಸಿಟಿ ರವಿ ವ್ಯಂಗ್ಯ

Spread the love

ಚಿಕ್ಕಮಗಳೂರು : ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆಶಿ ಕಣ್ಣೀರಿಟ್ಟಿದ್ದಾರೆ. ಡಿಕೆಶಿ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ. ಅವರು ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು. ತುಂಬಾ ಚೆನ್ನಾಗಿ ನಟನೆ ಮಾಡುತ್ತಾರೆ ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ . ಈ ನಟನೆ ಡಿ.ಕೆ.ಶಿವಕುಮಾರ್ ಅವರಿಗೆ ಬೈ ಬರ್ತ್ ಬಂದಿದೆ . ಬೈ ಮಿಸ್ಟೇಕ್ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.

 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಡಿಕೆ ಶಿವಕುಮಾರ್ ಅವರಿಗೆ ಹೀರೋ ಆಗುವ ವಯಸ್ಸು ಮುಗಿದು ಹೋಗಿದೆ. ವಿಲನ್ ಆಗೋಕೂ ತಾಕತ್ತು ಇಲ್ಲದಂತಾಗಿದೆ. ಆದರೆ, ಪ್ರಯತ್ನಪಟ್ಟರೆ ನಟನಾಗೋಕೆ ಪೋಷಕ ಪಾತ್ರಗಳು ಸಿಗುತ್ತದೆ. ಇನ್ನು ಮುಂದೆ ಪ್ರಶಸ್ತಿ ಏನಿದ್ರೂ ಡಿಕೆಶಿ ಪಾಲಿಗೆ. ಈ ರೀತಿಯ ಕಮೆಂಟ್ ಗಳನ್ನು ನಾನು ನೋಡಿದ್ದೇನೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. ಜಯರಾಮ್ ಸರ್ ಇಂದು ಸೇವಾ ನಿವೃತ್ತಿ

Spread the loveಬಹು ಸಂಸ್ಕೃತಿ ಹಾಗೂ ಗಡಿನಾಡು ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ