Breaking News
Home / ರಾಜಕೀಯ / 7 ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಕ್ರಮ: C.M. ಬೊಮ್ಮಾಯಿ

7 ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಕ್ರಮ: C.M. ಬೊಮ್ಮಾಯಿ

Spread the love

ಬೆಂಗಳೂರು: ‘ಏಳು ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣ ಬಾಕಿಯಿದ್ದು ಶೀಘ್ರವೇ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

 

ನಗರದಲ್ಲಿ ಭಾನುವಾರ ಗಾಂಧಿ ಸ್ಮಾರಕ ನಿಧಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಡಾ.ಸಿ.ಆರ್‌.ಚಂದ್ರಶೇಖರ್‌ ಅವರಿಗೆ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು.

’23 ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಿಸಲಾಗಿದೆ. ಜಾಗದ ಸಮಸ್ಯೆಯ ಕಾರಣಕ್ಕೆ ಕೆಲವು ಜಿಲ್ಲೆಗಳಲ್ಲಿ ಭವನ ನಿರ್ಮಾಣ ಕಾರ್ಯವು ನೆನಗುದಿಗೆ ಬಿದ್ದಿದೆ. ಸಮಸ್ಯೆ ಬಗೆಹರಿಸಲಾಗುವುದು’ ಎಂದರು.

‘ಖಾದಿ ಉದ್ಯಮ ಹಾಗೂ ಗ್ರಾಮೀಣ ಕೈಗಾರಿಕೆಗಳ ಬೆಳವಣಿಗೆಗೆ ಹೊಸ ಯೋಜನೆ ಜಾರಿಗೆ ತಂದು ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಗ್ರಾಮೀಣ ಕೈಗಾರಿಕೆಗಳು ಬೆಳವಣಿಗೆಯಾದರೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಸೃಷ್ಟಿ ಆಗಲಿದೆ’ ಎಂದು ಹೇಳಿದರು.

‘ಮೋಹನದಾಸ ಕರಮಚಂದ ಗಾಂಧಿಯಿಂದ ಮಹಾತ್ಮ ಆಗುವ ತನಕ ಗಾಂಧೀಜಿ ಅವರ ಪಯಣ ಅದ್ಭುತ. ಸದಾ ಪರಿವರ್ತನೆ, ಶುದ್ಧೀಕರಣಕ್ಕೆ ತೆರೆದುಕೊಂಡಿದ್ದರು’ ಎಂದರು.

‘ಬೇರೆ ದೇಶಗಳು ಯುದ್ಧದಿಂದ ಸ್ವಾತಂತ್ರ್ಯ ಗಳಿಸಿದವು. ಮಹಾತ್ಮ ಗಾಂಧಿ ಅವರು ಅಹಿಂಸೆ ಹಾಗೂ ಸತ್ಯವನ್ನೇ ಹೋರಾಟದ ಅಸ್ತ್ರವಾಗಿ ಮಾಡಿಕೊಂಡಿದ್ದರು. ಗಾಂಧೀಜಿ ಅವರ ಚಿಂತನೆಗಳು ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಪ್ರಸ್ತುತ’ ಎಂದರು.

ಶಾಸಕ ಎಚ್‌.ಕೆ.ಪಾಟೀಲ್‌ ಮಾತನಾಡಿ, ‘ಗಾಂಧೀಜಿ ಅವರದ್ದು ಚರ್ಚಿಸುವ ವ್ಯಕ್ತಿತ್ವ ಅಲ್ಲ; ಧ್ಯಾನಿಸುವ ವ್ಯಕ್ತಿತ್ವ. ಗ್ರಾಮೀಣಾಭಿವೃದ್ಧಿಯಿಂದ ರಾಷ್ಟ್ರ ಕಲ್ಯಾಣ ಸಾಧ್ಯ ಎಂದು ಗಾಂಧೀಜಿ ಪ್ರತಿಪಾದಿಸಿದ್ದರು. ರಾಜ್ಯದಲ್ಲಿ ಗ್ರಾಮ ಸ್ವರಾಜ್‌ ಹಾಗೂ ಪಂಚಾಯತ್‌ರಾಜ್‌ ಕಾಯ್ದೆ ಸಮಪರ್ಕವಾಗಿ ಅನುಷ್ಠಾನಕ್ಕೆ ತರಬೇಕು’ ಎಂದು ಕೋರಿದರು.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ