Breaking News

ಗದಗ _ಬೆಟಗೇರಿ ಅವಳಿ ನಗರದಲ್ಲಿ ಹದಗೆಟ್ಟ ರಸ್ತೆ‌ ರಿಪೇರಿ ಮಾಡಿಸಿ.. ಶಾಸಕ ಹೆಚ್ ಕೆ ಪಾಟೀಲ್

Spread the love

ಗದಗ: ಗದಗ ಬೆಟಗೇರಿ ಅವಳಿ ನಗರದಲ್ಲಿ ರಸ್ತೆಗಳು ಹದಗೆಟ್ಟಿದ್ದು ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗಿದೆ. ಶೀಘ್ರವಾಗಿ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಗದಗ ಮತಕ್ಷೇತ್ರದ ಶಾಸಕ ಹೆಚ್ ಕೆ ಪಾಟೀಲ್​ ಮನವಿ ಮಾಡಿದ್ದಾರೆ.

ಈ ಕುರಿತು ಜಿಲ್ಲಾಡಳಿತಕ್ಕೆ ಪತ್ರ ಬರೆದಿರುವ ಶಾಸಕರು, ಹದಗೆಟ್ಟಿರುವ ರಸ್ತೆಗಳಿಂದಾಗಿ ಸಾರ್ವಜನಿಕರು ಎಲ್ಲಿ, ಯಾವ ರೀತಿ ಅಪಘಾತಗಳಾಗುತ್ತವೆಯೋ ಎಂಬ ಭಯದಿಂದಲೇ ಸಂಚರಿಸುವಂತಾಗಿದೆ. ಕೆಲವೆಡೆ ಸಂಚಾರವೇ ದುಸ್ತರವಾಗಿದೆ. ಹೀಗಾಗಿ, ಯುದ್ಧೋಪಾದಿಯಲ್ಲಿ ಅವಳಿ ನಗರದ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸಿ ವಾಹನ ಮತ್ತು ಜನರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ವಿನಂತಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ್, ಶಾಸಕರಿಗೆ ಇತ್ತೀಚೆಗೆ ನಗರದ ಮೇಲೆ ಬಹಳಷ್ಟು ಪ್ರೀತಿ ಬಂದುಬಿಟ್ಟಿದೆ. ನಗರದ ರಸ್ತೆ ದುರಸ್ತಿಗೆ ಸಚಿವರು 9 ಕೋಟಿ ಅನುದಾನ ಮೀಸಲಿಟ್ಟಿದ್ದಾರೆ. ಮಳೆಗಾಲ ಮುಗಿದ ಬಳಿಕ ಕಾಮಗಾರಿ ಆರಂಭಿಸಲಾಗುತ್ತದೆ ಎಂದಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ