Breaking News

ಬಳ್ಳಾರಿ ಕೊಲೆ ಪ್ರಕರಣ : 7 ಜನರ ಬಂಧನ, ಮೂವರಿಗಾಗಿ ಶೋಧ

Spread the love

ಬಳ್ಳಾರಿ : ಸೆ.28ರಂದು ಮಧ್ಯರಾತ್ರಿ ರೇಡಿಯೋ ಪಾರ್ಕ್ ಬಳಿ ಹತ್ಯೆಗೀಡಾಗಿದ್ದ ಕುಂಟ ಮಂಜು ಕೊಲೆ ಪ್ರಕರಣದ ಆರೋಪಿಗಳನ್ನು ಕೌಲ್‍ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ ಏಳು ಆರೋಪಿಗಳ ಬಂಧನವಾಗಿದ್ದು, ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇಲಿಯಾಸ್, ಹುಸೇನ್ ಅಲಿಯಾಸ್ ಲಕ್ಷ್ಮಣ, ಭಾಸ್ಕರ್, ಸಂತೋಷ ಸರ್ವರ್, ಪ್ರಭಾಕರ್, ರಘು ಎಂಬುವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಮೃತ ಕುಂಟ ಮಂಜುನನ್ನು ಹತ್ಯೆಗೈಯಲು ಭಾಸ್ಕರ್ ಮತ್ತು ಇಲಿಯಾಸ್ ಎಂಬುವವರು 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು. ತಮ್ಮ ವ್ಯಾಪಾರಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗಿದ್ದ ಹಳೆ ವೈಷಮ್ಯವೇ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ