Breaking News

ಕಾಂಗ್ರೆಸ್ ಈ‌‌ ದೇಶಕ್ಕೆ ಒಂದು ಶಾಪ, ಇದನ್ನು ಬ್ಯಾನ್​ ಮಾಡಬೇಕು: ಬಸವಗೌಡ ಪಾಟೀಲ

Spread the love

ಬಾಗಲಕೋಟೆ: ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡಬೇಕು. ಕಾಂಗ್ರೆಸ್ ಈ‌‌ ದೇಶಕ್ಕೆ ಒಂದು ಶಾಪವಾಗಿದೆ. ಸ್ವಾತಂತ್ರ್ಯ ಬಳಿಕ ಕಾಂಗ್ರೆಸ್​ನನ್ನು ವಿಸರ್ಜಿಸುವಂತೆ ಗಾಂಧೀಜಿ ಹೇಳಿದ್ದರು ಎಂದು ವಿಜಯಪುರ ಶಾಸಕ ಬಸವಗೌಡ ಪಾಟೀಲ ಯತ್ನಾಳ್​ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಬಾಗಲಕೋಟೆಯಲ್ಲಿ ಗುಡುಗಿದ್ದಾರೆ.

ಬಾಗಲಕೋಟೆಯಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪೂರ್ತಿ ಹತಾಶರಾಗಿದ್ದಾರೆ. ಹೀಗಾಗಿ ಆರ್​​ಎಸ್​ಎಸ್ ಸಂಘಟನೆ ಬ್ಯಾನ್ ಮಾಡಬೇಕು ಎಂದು ಹೇಳುತ್ತಿದ್ದಾರೆ. ಆರ್​​ಎಸ್​ಎಸ್​ ದೇಶಭಕ್ತ ಸಂಘಟನೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ದೇಶಭಕ್ತರನ್ನು ತಯಾರು ಮಾಡುವಂತಹ ಕಾರ್ಖಾನೆ ಆರ್​ಎಸ್​ಎಸ್​ ಆಗಿದೆ ಎಂದು ಅವರು ಹೇಳಿದರು.ಕಾಂಗ್ರೆಸ್​ಗೆ ಸಂತೋಷವಾಗಿದೆ: ಆದ್ರೆ ಈ ಪಿಎಫ್ಐ ಸಂಘಟನೆ ದೇಶದಲ್ಲಿ ಹಿಂದೂಗಳ ಹತ್ಯೆ ಮಾಡುವುದು.

ಹಿಂದೂ ನಾಯಕರ ಕೊಲೆ, ಲವ್ ಜಿಹಾದ್ ಮಾಡಬೇಕೆಂಬ ಕುತಂತ್ರಕ್ಕೆ ಸಾಕ್ಷಿಯಾಗಿದೆ. ಸುಮ್ಮನೆ ಯಾರು ನಿಷೇಧ ಹೇರುವಂತಹ ಕೆಲಸ ಮಾಡಿಲ್ಲ. ಅರಬ್ ದೇಶಗಳಿಂದ ಸಾವಿರಾರು ಕೋಟಿ ಈ ಚಟುವಟಿಕೆಗೆ ಬರುತ್ತಿರುವ ಬಗ್ಗೆ ದಾಖಲೆ ಸಿಕ್ಕಿದೆ. ಪಿಎಫ್ಐ ನಿಷೇಧ ಆಗಿದ್ದರಿಂದ ಕಾಂಗ್ರೆಸ್​ಗೆ ಒಳಗಿನಿಂದಲೇ ಸಂತೋಷವಾಗಿದೆ ಎಂದು ಯತ್ನಾಳ್​ ವ್ಯಂಗ್ಯವಾಡಿದರು


Spread the love

About Laxminews 24x7

Check Also

ಸಾಲದ ಹಣಕ್ಕಾಗಿ ವ್ಯಕ್ತಿಯನ್ನ ಒತ್ತೆ ಇಟ್ಟುಕೊಂಡ ಸಾಲಗಾರ

Spread the loveವಿಜಯಪುರ, ಜೂನ್​​ 27: ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಸಾಲದ (Debt) ಹಣ (money) ವಸೂಲಿ ಮಾಡುವ ನೆಪದಲ್ಲಿ ವ್ಯಕ್ತಿಯನ್ನು ಒತ್ತೆಯಾಗಿಟ್ಟುಕೊಂಡಿರೋ ಗಂಭೀರ ಆರೋಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ