Breaking News

ಅ.28 ರಂದು 252 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ

Spread the love

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಹಾಗೂ ಗಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ.

2022ರ ಆಗಸ್ಟ್​​ನಿಂದ ನವೆಂಬರ್​​ವರೆಗೆ ಅವಧಿ ಮುಕ್ತಾಯವಾಗಲಿರುವ 252 ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ 187 ಖಾಲಿ ಇರುವ ಗ್ರಾಮ ಪಂಚಾಯತ್​​ ಸದಸ್ಯ ಸ್ಥಾನಗಳಿಗೆ ಉಪಚುನಾವಣೆಯ ದಿನಾಂಕ ಪ್ರಕಟಿಸಿದೆ. ಅದರಂತೆ ಅಕ್ಟೋಬರ್ 28ರಂದು ಮತದಾನ ನಡೆಯಲಿದೆ.

ಅ.18 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅ.19 ನಾಮಪತ್ರ ಪರಿಶೀಲನೆ ನಡೆಯಲಿದೆ. ಅ.21 ನಾಮಪತ್ರ ಹಿಂಪಡೆಯುವ ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಅ.28ಕ್ಕೆ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ