Breaking News

ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಬೆಂಗಳೂರಿಗೆ 43ನೇ ಸ್ಥಾನ: ಸಾರ್ವಜನಿಕರಿಂದ ಟೀಕೆ

Spread the love

ಬೆಂಗಳೂರು: ಕೇಂದ್ರದ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ 2022ರ ಪ್ರಕಾರ 45 ನಗರಗಳ ಪಟ್ಟಿಯಲ್ಲಿ ಸಿಲಿಕಾನ್​​ ಸಿಟಿ 43ನೇ ಸ್ಥಾನ ಪಡೆದುಕೊಂಡಿದೆ. ಈ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೆಂಗಳೂರು ರ‍್ಯಾಂಕಿಂಗ್​ನಲ್ಲಿ 15ರಷ್ಟು ಕುಸಿತ ಕಂಡಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ವಿವಿಧ ಅಂಕಿ ಅಂಶಗಳನ್ನು ಆಧರಿಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ 10 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ 45 ನಗರಗಳಲ್ಲಿ ಬೆಂಗಳೂರು 43ನೇ ಸ್ಥಾನ ಪಡೆದಿದೆ.

ಬಿಬಿಎಂಪಿ ವಿಶೇಷ ಆಯುಕ್ತ ಹರೀಶ್ ಕುಮಾರ್ ಮಾತನಾಡಿ, ಕಳೆದ ಬಾರಿ 10 ಸಾವಿರ ಜನರಿಂದ ಪ್ರತಿಕ್ರಿಯೆ ಪಡೆಯಲಾಗಿದ್ದು, ಈ ಬಾರಿ ಅದನ್ನು 5 ಲಕ್ಷಕ್ಕೆ ಹೆಚ್ಚಿಸಲಾಗಿದೆ. ನಗರ ಪ್ರದೇಶಗಳಲ್ಲಿ ಸವಾಲು ವಿಭಿನ್ನವಾಗಿದ್ದು, ದೊಡ್ಡ ದೊಡ್ಡ ನಗರಗಳಿಗೆ ಸಣ್ಣ ನಗರಗಳನ್ನು ಹೋಲಿಕೆ ಮಾಡುವುದು ತಪ್ಪಾಗುತ್ತದೆ ಎಂದಿದ್ದಾರೆ.


Spread the love

About Laxminews 24x7

Check Also

ಬುಧವಾರವೂ ಜಿಲ್ಲೆಯಎಲ್ಲ ತಾಲ್ಲೂಕುಗಳ ಶಾಲೆಗಳಿಗೆರಜೆ ಘೋಷಣೆ: ಜಿಲ್ಲಾಧಿಕಾರಿ

Spread the love ಬುಧವಾರವೂ ಜಿಲ್ಲೆಯಎಲ್ಲ ತಾಲ್ಲೂಕುಗಳ ಶಾಲೆಗಳಿಗೆರಜೆ ಘೋಷಣೆ ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿಮಳೆ ಸುರಿಯುತ್ತಿದ್ದು ಜಿಲ್ಲೆಯ ಜನಜೀವನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ