ಹುಬ್ಬಳ್ಳಿ: ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕೈಗಾರಿಕೆಗಳಿಗೆ ಪ್ರೋತ್ಸಾಹ ಸಿಗುತ್ತಿಲ್ಲ ಎಂದು ಹೇಳಿದ ಅವರು, ಪರೋಕ್ಷವಾಗಿ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಐಟಿಬಿಟಿ ಇಲಾಖೆಯಿಂದ ನಡೆಯುತ್ತಿರುವ ಬೆಂಗಳೂರು ಟೆಕ್ ಉತ್ಸವದಲ್ಲಿ ಬಹಿರಂಗವಾಗಿಯೇ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಗದೀಶ್ ಶೆಟ್ಟರ್, ಕೈಗಾರಿಕೆ ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಕೆಲಸ ತೃಪ್ತಿಕರವಾಗಿಲ್ಲ. ಅಧಿಕಾರಿ ವರ್ಗದವರು ಉದ್ಯಮಿಗಳಿಗೆ ಸಹಕಾರ ನೀಡುತ್ತಿಲ್ಲ. ಕೈಗಾರಿಕೆಗಳ ಸ್ಥಾಪನೆ ಕುರಿತು ಪ್ರೋತ್ಸಾಹ ನೀಡಲು ಸರ್ಕಾರದ ಮಟ್ಟದಲ್ಲಿ ಬದಲಾವಣೆಯಾಗಬೇಕಿದೆ. ಕೈಗಾರಿಕೆ ಸಚಿವರು ಪ್ರಚಾರಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಕೇವಲ ಭಾಷಣ ಮಾಡಿ ಹೋಗುತ್ತೇವೆ. ಆದರೆ, ಅನುಷ್ಠಾನ ಆಗುತ್ತಿಲ್ಲ. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ ನಿರ್ಮಾಣ ಮಾಡಬೇಕು ಎಂದು ಹೇಳಿದ್ದಾರೆ.