Breaking News

ಅನ್ಯ ಜಾತಿ ಯುವಕನ ಜತೆ ಮಗಳು ಪರಾರಿ: ಮರ್ಯಾದೆಗೆ ಅಂಜಿ ಸಾವಿನ ಹಾದಿ ಹಿಡಿದ ತಂದೆ, ತಾಯಿ, ಸಹೋದರ

Spread the love

ಚಿಕ್ಕಬಳ್ಳಾಪುರ: ಮಾನ-ಮರ್ಯಾದೆಗೆ ಹೆದರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.

ತಾಯಿ ಸರೋಜಮ್ಮ, ತಂದೆ ಶ್ರೀರಾಮಪ್ಪ ಹಾಗೂ ಮಗ ಮನೋಜ್ ಮೃತ ದುರ್ದೈವಿಗಳು.

ಹೆತ್ತ ಮಗಳು ಅನ್ಯ ಜಾತಿಯ ಯುವಕನ ಜೊತೆ ಪರಾರಿಯಾಗಿದ್ದಕ್ಕೆ ಮನನೊಂದು ಸಾವಿನ ಹಾದಿ ಹಿಡಿದಿದ್ದಾರೆ.

26 ವರ್ಷದ ಮಗಳು ಅರ್ಚನಾ, ನಾರಾಯಣಸ್ವಾಮಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆ. ಯುವಕ ಅನ್ಯಜಾತಿಯವನಾಗಿರುವುದರಿಂದ ಊರಿನವರಿಂದ ನಿಂದನೆ ಒಳಗಾಗಬಹುದು ಎಂದು ಹೆದರಿ ಮನೆಯಲ್ಲಿಯೇ ಸಾಮೂಹಿಕವಾಗಿ ವಿಷ ಸೇವಿಸಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. 


Spread the love

About Laxminews 24x7

Check Also

ಉದ್ಯೋಗಾಂಕ್ಷಿಗಳು ಬಿಜೆಪಿ ಮಾತು ಕೇಳಿ FIR ಹಾಕಿಸಿಕೊಳ್ಳಬೇಡಿ: ಪ್ರದೀಪ್ ಈಶ್ವರ್

Spread the love ಬೆಂಗಳೂರು: ಉದ್ಯೋಗಾಂಕ್ಷಿಗಳು  ಬಿಜೆಪಿ ಅವರ ಮಾತು ಕೇಳಿ ಎಫ್‌ಐಆರ್  ಹಾಕಿಸಿಕೊಂಡು ಕೋರ್ಟ್‌ಗೆ ಅಲೆದಾಟ ಮಾಡಬೇಡಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ