Breaking News

F,S,L, ಅಧಿಕಾರಿ ಆತ್ಮಹತ್ಯೆ; ಕ್ಷಮಿಸಿ ಎಂದು ವಿಚ್ಛೇದಿತ ಪತಿಗೆ ಡೆತ್​ನೋಟ್ ಮೂಲಕ ವಿನಂತಿ

Spread the love

ಬೆಂಗಳೂರು: ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಪಾರ್ಟ್​ಮೆಂಟ್​ವೊಂದರಲ್ಲಿ ಈ ಪ್ರಕರಣ ನಡೆದಿದ್ದು, ಸ್ಥಳದಲ್ಲಿ ಡೆತ್​ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ ಕ್ಷಮೆಯನ್ನೂ ಕೋರಲಾಗಿದೆ.

 

ಎಫ್‌ಎಸ್​ಎಲ್​ ಅಧಿಕಾರಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಈಕೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್​​ನಲ್ಲಿ ನೇಣು ಬಿಗಿದುಕೊಂಡಿದ್ದರು. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಈಕೆ ಇತ್ತೀಚೆಗೆ ವಿಚ್ಛೇದನ ಪಡೆದು ಪತಿಯಿಂದ ದೂರವಿದ್ದರು. ಆದರೆ ತನ್ನನ್ನು ಕ್ಷಮಿಸುವಂತೆ ಡೆತ್​ನೋಟ್​ ಮೂಲಕ ವಿಚ್ಛೇದಿತ ಪತಿಯಲ್ಲಿ ಕೋರಿಕೊಂಡಿದ್ದಾರೆ. ಜೊತೆಗೆ ಪಾಲಕರಲ್ಲೂ ಕ್ಷಮೆ ಕೋರಿದ್ದಾರೆ. ಅಲ್ಲದೆ ನನ್ನ ಸಾವಿಗೆ ನಾನೇ ಕಾರಣ ಎಂದೂ ಬರೆದುಕೊಂಡಿದ್ದಾರೆ. ಈಕೆ ವಿಚ್ಛೇದನದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ