Breaking News

ಉಸಿರುಗಟ್ಟಿ ‌ಜೋಡೆತ್ತು ಸಾವು: ಮುಗಿಲು ಮುಟ್ಟಿದ ಬಡ ರೈತ ಕುಟುಂಬಸ್ಥರ ಆಕ್ರಂದನ

Spread the love

ಬೆಳಗಾವಿ: ಜಿಲ್ಲೆಯ ‌ಬೈಲಹೊಂಗಲಪಟ್ಟಣದ ಪ್ರಭುನಗರ ನಾಲ್ಕನೇ ಅಡ್ಡ ರಸ್ತೆ ನಿವಾಸಿ, ರೈತ ಮಹಿಳೆ ಸಾಬವ್ವ ಹುಡೇದ ಕುಟುಂಬಸ್ಥರಿಗೆ ಸೇರಿದ ಜೋಡೆತ್ತುಗಳು ಉಸಿರುಗಟ್ಟಿ ಸಾವಿಗೀಡಾಗಿವೆ.

ದನದ ಕೊಟ್ಟಿಗೆಯಲ್ಲಿ ಬೆಲಗ (ಕಂಬ) ಮುರಿದ ಪರಿಣಾಮ ಜೋಡೆತ್ತುಗಳ ಹಗ್ಗ ಒಂದಕ್ಕೊಂದು ಸಿಲುಕಿಕೊಂಡಿವೆ. ಪರಿಣಾಮ ಅವು ಉಸಿರುಗಟ್ಟಿ ಕೊನೆಯುಸಿರೆಳೆದಿವೆ. ಮಾಲೀಕರಿಗೆ ವಿಷಯ ತಿಳಿಯುವಷ್ಟರಲ್ಲಿ ಜೋಡೆತ್ತುಗಳ ಪ್ರಾಣ ಪಕ್ಷಿ ಹಾರಿ ಹೋಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಸುಮಾರು ಆರು ಲಕ್ಷ ಮೌಲ್ಯದ ಜೋಡೆತ್ತುಗಳು ಇವಾಗಿವೆ. ರೈತರ ಜಮೀನಿನಲ್ಲಿ ಸಕಲ ವಿಧಿ, ವಿಧಾನದಿಂದ ಅಂತ್ಯಕ್ರಿಯೆ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಘಟನಾ ಸ್ಥಳಕ್ಕೆ ಗ್ರಾಮಲೆಕ್ಕಾಧಿಕಾರಿ ಪಿ.ಎಂ.ಕಮ್ಮಾರ, ಪಶು ವೈದ್ಯ ಮಹೇಶ ಮೇಟಿ ಭೇಟಿ ನೀಡಿದ್ದಾರೆ.


Spread the love

About Laxminews 24x7

Check Also

ಅಲಿ ಖಮೇನಿ ಪೋಸ್ಟರ್ ವಿರುದ್ಧ ಶ್ರೀರಾಮ ಸೇನೆಯಿಂದ ಶಿವಾಜಿ ಹಾಗೂ ಮೋದಿ ಬ್ಯಾನರ್ ಅಭಿಯಾನ

Spread the loveಬೆಳಗಾವಿ : ನಗರದಲ್ಲಿ ಅಳವಡಿಸಿರುವ ಇರಾನ್ ದೇಶದ ಅಲಿ ಖಮೇನಿ ಪೋಸ್ಟರ್ ವಿರುದ್ಧ ಶ್ರೀರಾಮ ಸೇನೆಯಿಂದ ಆಫ್ಜಲ್‌ಖಾನ್‌ನ ವಧೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ