Breaking News

ರಾಜ್ಯ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ ಬೃಹತ್‌ ಸಮಾವೇಶಕ್ಕೆ ಸಿದ್ಧತೆ

Spread the love

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಕೊಡವಿಕೊಂಡು ಸಿದ್ದತೆ ನಡೆಸಲು ಈಗ ರಾಜ್ಯ ಬಿಜೆಪಿ ಘಟಕ ಮುಂದಾಗಿದ್ದು,ಘಟಾನುಘಟಿ ನಾಯಕರುಗಳನ್ನು ಆಹ್ವಾನಿಸಿ ಸಮಾವೇಶ ನಡೆಸಲು ಮುಂದಾಗಿದೆ.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್, ಕೇಂದ್ರ ಸಚಿವರು ಸೇರಿದಂತೆ ಹಲವು ನಾಯಕರನ್ನು ಮುಂಬರುವ ದಿನಗಳಲ್ಲಿ ರಾಜ್ಯಕ್ಕೆ ಆಹ್ವಾನಿಸಲಾಗುತ್ತಿದೆ.

 

ಒಂದು ಕಡೆ ಕಾಂಗ್ರೆಸ್ ತನ್ನ ಸಂಘಟನಾತ್ಮಕ ಕಾರ್ಯಗಳಿಂದ ಪುಟಿದೆದ್ದಿದೆ.ಹೀಗಾಗಿ ಬರುವ ದಿನಗಳಲ್ಲಿ ಬಿಜೆಪಿಯ ಪ್ರಮುಖ ನಾಯಕರು ರಾಜ್ಯದಲ್ಲಿ ಸಾಲು ಸಾಲು ಸಮಾವೇಶಗಳನ್ನು ನಡೆಸಿ ಪಕ್ಷದ ಪರವಾದ ಅಲೆಯನ್ನು ಸೃಷ್ಟಿಸಲಿದ್ದಾರೆ.

ನ.2ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮುಂಭಾಗದಲ್ಲಿ ನಿರ್ಮಾಣ ಮಾಡಿರುವ ನಾಡಪ್ರಭು ಹಾಗೂ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಬೃಹತ್ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕೆಂಪೇಗೌಡರ ಥೀಮ್‍ಪಾರ್ಕ್ ಕೂಡ ಲೋಕಾರ್ಪಣೆ ಮಾಡುವರು.

 

ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಎರಡನೇ ರನ್‍ವೇಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ದೇಶದಲ್ಲಿ ದೆಹಲಿ, ಮುಂಬೈ ನಂತರ ಎರಡನೇ ರನ್‍ವೇ ಹೊಂದಿದ ಹೆಗ್ಗಳಿಕೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಲಿದೆ.

ಇದೇ ಸಂದರ್ಭದಲ್ಲಿ ಮೋದಿ ಅವರು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದು, ಇವೆಲ್ಲವೂ ಚುನಾವಣಾ ತಂತ್ರದ ಮುಂದುವರೆದ ಭಾಗ ಎಂದು ಹೇಳಲಾಗುತ್ತಿದೆ. ರಾಜ್ಯಕ್ಕೆ ಆಗಮಿಸುವ ಅವರು, ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬರುವ ದಿನಗಳಲ್ಲಿ ರಾಜ್ಯಕ್ಕೆ ಮೋದಿ ಅವರನ್ನು ತಿಂಗಳಿಗೆ ಎರಡು ಬಾರಿ ಆಹ್ವಾನಿಸಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಮೂಲಕ ಬಿಜೆಪಿ ಚುನಾವಣಾ ಪ್ರಚಾರಕ್ಕೂ ರಣಕಹಳೆ ಮೊಳಗಿಸಲಿದೆ.

ಬಿಜೆಪಿಯ ಚುನಾವಣಾ ಚಾಣಾಕ್ಯ ಎಂದೇ ಕರೆಯುವ ಗೃಹಸಚಿವ ಅಮಿತ್ ಶಾ ಅವರು ಈ ತಿಂಗಳು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸೂರಗೊಂಡನ ಕೊಪ್ಪಕ್ಕೆ ಆಗಮಿಸಲಿರುವ ಅವರು, ರಾಜ್ಯಮಟ್ಟದ ಬಂಜಾರ ಸಮಾವೇಶದಲ್ಲಿ ಭಾಗಿಯಾಗುವರು.

ಹಿಂದುಳಿದ ಬಂಜಾರ ಸಮಾವೇಶವನ್ನು ತನ್ನತ್ತ ಸೆಳೆಯಲು ಮುಂದಾಗಿರುವ ಬಿಜೆಪಿ ಸೂರಗೊಂಡನ ಕೊಪ್ಪದಲ್ಲಿ ರಾಜ್ಯಮಟ್ಟದ ಲಂಬಾಣಿ ಸಮಾವೇಶ ನಡೆಸಲು ತೀರ್ಮಾನಿಸಿದ್ದು, ದಿನಾಂಕ ನಿಗದಿಯಾಗುವುದಷ್ಟೇ ಬಾಕಿ ಇದೆ. ಇದಕ್ಕೆ ಖುದ್ದು ಅಮಿತ್ ಶಾ ಅವರೇ ಆಗಮಿಸಲಿದ್ದಾರೆ.

 


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ