ಮೈಸೂರು: ವಿಶ್ವ ವಿಖ್ಯಾತ ದಸರಾ (Mysuru Dasara 2022) ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಜಂಬೂ ಸವಾರಿಯ ಪ್ರಮುಖ ಆಕರ್ಷಣೆ ಗಜ ಪಡೆಯ ಕ್ಯಾಪ್ಟನ್ ಅಭಿಮನ್ಯು (Abhimanyu) ಕೂಡ ಅಂಬಾರಿ ಹೊರಲು ಫಿಟ್ ಆಗಿ ಸಿದ್ಧನಾಗಿದ್ದಾನೆ.
ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಅಂಬಾರಿ ಹೊತ್ತು ರಾಜಮಾರ್ಗದಲ್ಲಿ ಸಾಗಲು ಗಜಪಡೆ ಸಿದ್ಧವಾಗಿದೆ. ಅರಮನೆ (Mysuru Palace) ಗೆ ಆಗಮಿಸಿದ್ದ ಗಜ ತಂಡದಲ್ಲಿ ಜಂಬೂ ಸವಾರಿಯಲ್ಲಿ ಭಾಗಿಯಾಗುತ್ತಿರೋದು 9 ಆನೆಗಳು ಮಾತ್ರ. ಈ ಬಾರಿ ಜಾನಪದ ತಂಡ, ಸ್ತಬ್ಧ ಚಿತ್ರಗಳು ಹೆಚ್ಚು ಇರುವ ಕಾರಣ ಮೆರವಣಿಗೆಯಲ್ಲಿ ಹೆಚ್ಚು ಆನೆಗಳು (Elephant) ಭಾಗಿಯಾಗಲು ಕಷ್ಟವಾಗುವ ಹಿನ್ನೆಲೆ 9 ಆನೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.ಜಂಬೂ ಸವಾರಿ ಆನೆಗಳು:
* ಕ್ಯಾಪ್ಟನ್ – ಅಭಿಮನ್ಯು
* ನಿಶಾನೆ ಆನೆ – ಅರ್ಜುನ
* ನೌಫತ್ ಆನೆ- ಗೋಪಿ
* ಕುಮ್ಕಿ ಆನೆಗಳು – ಕಾವೇರಿ ಮತ್ತು ಚೈತ್ರ
* ಧನಂಜಯ, ಮಹೇಂದ್ರ
* ಭೀಮ, ಗೋಪಾಲಸ್ವಾಮಿ ಆನೆಗಳು ಭಾಗಿ ಆಗಲಿವೆ. ಗಜಪಡೆ ಯಶಸ್ವಿಯಾಗಿ ಜಂಬೂ ಸವಾರಿ ಮುಗಿಸುವ ಬಗ್ಗೆ ಡಿಸಿಎಫ್ ಕರಿಕಾಳನ್ ಕೂಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.