Breaking News

ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

Spread the love

ಧಾರವಾಡ: ಗುರುವಾರ ತಡರಾತ್ರಿ ಧಾರವಾಡ ಎಸ್ಪಿ ಕಚೇರಿ ಎದುರು ಅಪಘಾತ ನಡೆದಿತ್ತು. ರಸ್ತೆ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶಿವಣ್ಣ ಬೆಲ್ಲದ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಸಹೋದರ ಶಿವಣ್ಣ ಬೆಲ್ಲದ ವಿದ್ಯಾವರ್ಧಕ ಸಂಘದ ಮಾಜಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 2008ರಲ್ಲಿ ಅಣ್ಣ ಚಂದ್ರಕಾಂತ ವಿರುದ್ಧವೇ ಚುನಾವಣೆಗೆ ಸ್ಪರ್ಧಿಸಿದ್ದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ