Breaking News

ಲೋಕಾರ್ಪಣೆಗೊಂಡು ವಾರದ ಒಳಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಹಾನಿ

Spread the love

ಗಾಂಧಿನಗರ : ಸೆಪ್ಟೆಂಬರ್ 30 ರಂದು ಲೋಕಾರ್ಪಣೆ ಗೊಳಿಸಲಾಗಿದ್ದ ಮುಂಬಯಿ ಸೆಂಟ್ರಲ್-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲ್ರೋಡ್ ವಕ್ತಾರರ ಪ್ರಕಾರ, ಗೈರತ್‌ಪುರ ಮತ್ತು ವತ್ವಾ ನಿಲ್ದಾಣಗಳ ನಡುವೆ ಗುರುವಾರ ಬೆಳಗ್ಗೆ 11.20ರ ಸುಮಾರಿಗೆ ಈ ಘಟನೆ ನಡೆದಿದೆ.

ಎಮ್ಮೆಗಳ ಹಿಂಡು ಢಿಕ್ಕಿಯಾದ ನಂತರ, ಇಂಜಿನ್ ನ ಮುಂಭಾಗಕ್ಕೆ ಹಾನಿಯಾಗಿದೆ.

“ಮೂರರಿಂದ ನಾಲ್ಕು ಎಮ್ಮೆಗಳು ಮುಂಬಯಿ -ಗಾಂಧಿನಗರದ ವಂದೇ ಭಾರತ್ ದಾರಿಯಲ್ಲಿ ಇದ್ದಕ್ಕಿದ್ದಂತೆ ಬಂದ ಕಾರಣ , ಎಫ್‌ಆರ್‌ಪಿ (ಫೈಬರ್-ರೀನ್‌ಫೋರ್ಸ್ಡ್ ಪ್ಲಾಸ್ಟಿಕ್) ನಿಂದ ಮಾಡಲ್ಪಟ್ಟ ಮುಂಭಾಗ ಹಾನಿಗೊಳಗಾಗಿದೆ.

ಮಹಾರಾಷ್ಟ್ರ ಮತ್ತು ಗುಜರಾತ್‌ನ ರಾಜಧಾನಿ ನಗರಗಳನ್ನು ಸಂಪರ್ಕಿಸುವ ಈ ರೈಲು ದೇಶದ ಮೂರನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿದೆ. ಮೊದಲ ರೈಲು ಹೊಸದಿಲ್ಲಿ-ವಾರಣಾಸಿ ಮಾರ್ಗದಲ್ಲಿ, ಹೊಸದಿಲ್ಲಿ-ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಮಾರ್ಗದಲ್ಲಿ ಪ್ರಾರಂಭವಾಗಿದೆ.


Spread the love

About Laxminews 24x7

Check Also

25 ಸಾವಿರ ಲಂಚ ಪಡೆದು ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ  ಸಿಕ್ಕಿಬಿದ್ದ ಪಿಡಿಓ

Spread the loveಬಾಕಿ ಸಂಬಳ ನೀಡಲು ಲಂಚ ಪಡೆದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಹುಣಸೂರು ತಾಲೂಕು ಮುಳ್ಳೂರು ಗ್ರಾಮ ಪಂಚಾಯ್ತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ