Breaking News
Home / ರಾಜಕೀಯ / ಅಕ್ಟೋಬರ್‌ 28 ರಂದು ವಿನೂತನ ಕೋಟಿ ಕಂಠ ಗಾಯನ: ಸಚಿವ ಸುನಿಲ್‌ ಕುಮಾರ್

ಅಕ್ಟೋಬರ್‌ 28 ರಂದು ವಿನೂತನ ಕೋಟಿ ಕಂಠ ಗಾಯನ: ಸಚಿವ ಸುನಿಲ್‌ ಕುಮಾರ್

Spread the love

ಬೆಂಗಳೂರು: ರಾಜ್ಯದ ಸಾಂಸ್ಕೃತಿಕ ಲೋಕದಲ್ಲೇ ವಿನೂತನವಾದ ಕೋಟಿ ಕಂಠ ಗಾಯನ ಎಂಬ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದು ಅಕ್ಟೋಬರ್‌ 28ರಂದು ನಾಡಿನಾದ್ಯಂತ ಏಕಕಾಲದಲ್ಲಿ ಕನ್ನಡದ ಕವಿಗಳ ಜನಪ್ರಿಯ ಗೀತೆಗಳನ್ನು ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.

 

ಕಳೆದ ವರ್ಷ ‘ಮಾತಾಡ್‌ ಮಾತಾಡ್‌ ಕನ್ನಡ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ‘ಲಕ್ಷಕಂಠ ಗಾಯನ’ಕ್ಕೆ ಈಗಾಗಲೇ ನಾಡಿನಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಹೀಗಾಗಿ ರಾಜ್ಯೋತ್ಸವ ಪ್ರಯುಕ್ತ ಮತ್ತೆ ಈ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೋಟಿ ಕಂಠ ಗಾಯನ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ.

ಅಂದು ಏಕಕಾಲದಲ್ಲಿ ರಾಜ್ಯಾದ್ಯಂತ ಕೋಟಿ ಕಂಠಗಳಲ್ಲಿ ಕನ್ನಡ ಗೀತೆಗಳನ್ನು ಪ್ರಸ್ತುತಪಡಿಸುವ ಮಹತ್ವದ ನಿರ್ಧಾರವನ್ನು ನಮ್ಮ ಇಲಾಖೆ ತೆಗೆದುಕೊಂಡಿದೆ. ಕನ್ನಡಿಗರು, ಅನಿವಾಸಿ ಕನ್ನಡಿಗರು, ಹೊರನಾಡ ಕನ್ನಡಿಗರು ಹಾಗೂ ಗಡಿನಾಡ ಕನ್ನಡಿಗರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದು, ಪ್ರಪಂಚದಾದ್ಯಂತ ಕನ್ನಡದ ಕಂಪನ್ನು ಪಸರಿಸುವ ವಿನೂತನ ಕಾರ್ಯಕ್ರಮ ಇದಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್‌ 28ರಂದು ಬೆಳಗ್ಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ’ , ಡಾ.ಚನ್ನವೀರ ಕಣವಿ ಅವರ ‘ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ “, ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವಾ”, ಡಾ.ಡಿ.ಎಸ್.ಕರ್ಕಿಯವರ “ಹಚ್ಚೇವು ಕನ್ನಡದ ದೀಪ ” ಹಾಗೂ ಡಾ. ಹಂಸಲೇಖ ಅವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಎಂಬ ಐದು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ. ಇದನ್ನು ಹೊರತುಪಡಿಸಿಯೂ ಆಸಕ್ತರು ಬೇರೆ ಕನ್ನಡ ಗೀತೆಗಳನ್ನು ಸಮಯದ ಮಿತಿ ಆಧರಿಸಿ ಪ್ರಸ್ತುಪಡಿಸಬಹುದಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ