ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದ ಯೋಧ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಡಕುಂದ್ರಿ ಗ್ರಾಮದ 42 ವರ್ಷದ ಶಿವಾನಂದ ಬಾಬು ಸಿರಗಾಂವಿ ಮೃತ ಯೋಧ. ಶ್ರೀನಗರದ 55 ಆರ್‍ಆರ್ ಬಟಾಲಿಯನ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧ ಬಾಬು ಸಿರಗಾಂವಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತ ಯೋಧನಿಗೆ ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳಿದ್ದಾರೆ.
ಯೋಧನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು. ಬಡಕುಂದ್ರಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಶುಕ್ರವಾರ ಸಂಜೆ ಅಥವಾ ಶನಿವಾರ ಬೆಳಿಗ್ಗೆ ಯೋಧನ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಬರಲಿದೆ. ಸ್ವಗ್ರಾಮದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಂತರ ಗ್ರಾಮದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಮಾಡಿ, ಸಕಲ ಸರ್ಕಾರಿ ಗೌರವ ಹಾಗೂ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುತ್ತದೆ