ಬೆಂಗಳೂರು: ರೈತರು ಎಪಿಎಂಸಿ, ಭೂಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರೈತರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಹೋರಾಟಕ್ಕೆ ಬೆಂಬಲ ನೀಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದರಿಂದ ರೈತರ ಹೋರಾಟಕ್ಕೆ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರ ಬೆಂಬಲ ಸೂಚಿಸಲು ಸಾಧ್ಯವಿಲ್ಲ. ಇಡೀ ರಾಷ್ಟ್ರದಲ್ಲೇ ಬೆಂಬಲ ನೀಡಬೇಕು. ಹೀಗಾಗಿ ನಮ್ಮ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಈ ಬಗ್ಗೆ ಮಾತನಾಡಲಿದ್ದಾರೆ ಎಂದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಹೊತ್ತಿರುವ ರಣದೀಪ್ ಸುರ್ಜೆವಾಲ ಮಾತನಾಡಿ, ಬೆಂಬಲ ಸೂಚಿಸಲಾಗುತ್ತದೆ ಎಂದು ತಿಳಿಸಿದರು.