Breaking News

8ರಂದು ಅಣ್ಣಾಸಾಹೇಬ ಜೊಲ್ಲೆ ಜನ್ಮದಿನ: 2,000 ಅಂಗವಿಕಲರಿಗೆ ಸಲಕರಣೆ ವಿತರಣೆ

Spread the love

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ಜನ್ಮದಿನದ ಅಂಗವಾಗಿ ಅ. 8ರಂದು 2,000 ಅಂಗವಿಕಲರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಗುವುದು’ ಎಂದು ಯಕ್ಸಂಬಾದ ಬಸವಜ್ಯೋತಿ ಯುವ ಫೌಂಡೇಷನ್ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ ಹೇಳಿದರು.

 

ಪಟ್ಟಣದಲ್ಲಿ ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ‘ಜೊಲ್ಲೆ ಪರಿವಾರದಲ್ಲಿ ಸಮಾಜ ಸೇವೆಯ ಮೂಲಕವೇ ಜನ್ಮ ದಿನ ಆಚರಿಸಿಕೊಳ್ಳುವ ರೂಢಿ ಇದೆ. ಈ ಬಾರಿ ₹ 75 ಲಕ್ಷ ಮೌಲ್ಯದ ಸಲಕರಣೆಗಳ ವಿತರಣೆ, ಕ್ಷಯದಿಂದ ಬಳಲುತ್ತಿರುವ 100 ಹಿರಿಯರಿಗೆ ‘ಡಯಟ್ ಕಿಟ್’ ನೀಡಲಾಗುವುದು’ ಎಂದರು.

‘ನಿಪ್ಪಾಣಿಯ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಅ.8ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು’ ಎಂದರು.

‘ಅವಸಾನದ ಅಂಚಿನಲ್ಲಿದ್ದ ನಿಪ್ಪಾಣಿ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಈಗ 8.5 ಮೆಟ್ರಿಕ್‌ ಟನ್ ಕಬ್ಬು ನುರಿಸುವ ಸಾಮರ್ಥ್ಯಕ್ಕೆ ಏರಿಸಿದ್ದು ಅಣ್ಣಾಸಾಹೇಬ ಜೊಲ್ಲೆ ಅವರು. ಹೀಗಾಗಿ, ಅವರ ಜನ್ಮದಿನದಂದೇ ಪ್ರಸಕ್ತ ವರ್ಷದ ಹಂಗಾಮು ಆರಂಭಿಸಲಾಗುವುದು. ಅವರು ಕಳೆದ 30 ವರ್ಷಗಳಿಂದ ನಡೆದುಬಂದ ಹಾದಿಯ ‘ವಿಡಿಯೊ ಡಾಕುಮೆಂಟರಿ’ ಅನಾವರಣ ಮಾಡಲಾಗುವುದು’ ಎಂದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ