Breaking News

SC, ST ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಬಂಪರ್ ಗಿಫ್ಟ್ : ಎಸ್.ಸಿ ಮೀಸಲಾತಿ ಶೇ 15-17, ಎಸ್.ಟಿ ಮೀಸಲಾತಿ ಶೇ.3-7 ಹೆಚ್ಚಳ

Spread the love

ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಗಿಫ್ಟ್ ನೀಡಿದ್ದು, ಮೀಸಲಾತಿ ಹೆಚ್ಚಿಸಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಇಂದು ನಡೆದ ಸರ್ವಪಕ್ಷಗಳ ಸಭೆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದು, ಎಸ್ ಸಿ ಮೀಸಲಾತಿ ಶೇ 15 ರಿಂದ 17, ಎಸ್ ಟಿ ಮೀಸಲಾತಿ ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಿದ್ದಾರೆ.

ಮೀಸಲಾತಿ ಹೆಚ್ಚಳದ ಕುರಿತು ನಾಳೆಯೇ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ. ಈ ಮೂಲಕ ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಗಿಫ್ಟ್ ನೀಡಿದ್ದಾರೆ. ನ್ಯಾ.ನಾಗಮೋಹನ್ ದಾಸ್ ವರದಿ ಆಧರಿಸಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.

ಇಂದು ಬಿಜೆಪಿ ಕಾರ್ಯಕಾರಣಿ ಸಭೆ ನಡೆದಿದ್ದು. ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಎಸ್ ಸಿ. ಎಸ್ ಟಿ ಮೀಸಲಾತಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಎಂದು ಹೇಳಿದ್ದರು.

ಸಾಮಾಜಿಕವಾಗಿಯೂ ಹಲವು ಸಮಸ್ಯೆ ಬಗೆಹರಿಸಲು ಬದ್ಧವಾಗಿದ್ದೇನೆ. ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ. ಜನಪರವಾಗಿರುವ ಆಡಳಿತವನ್ನುನಮ್ಮ ಸರ್ಕಾರ ಮಾಡುತ್ತಿದೆ ಚುನಾವಣೆ ದೃಷ್ಟಿಯಿಂದ ಇದು ಮಹತ್ವದ್ದು ಎಂದು ಸಿಎಂ ಹೇಳಿದ್ದರು. ಎಸ್‌ ಟಿ ವರ್ಗಕ್ಕೆ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಲಾಗಿದ್ದು, ಈ ನಿಟ್ಟಿನಲ್ಲಿ ಕೋರ್‌ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – ಮಂಜುನಾಥ ಮಹಾರಾಜ.

Spread the loveಹುಕ್ಕೇರಿ : ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ