Breaking News

ಬಿಜೆಪಿ ಅಧಿಕಾರಕ್ಕೇರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: B.S.Y.

Spread the love

ಬೆಂಗಳೂರು: ಇಂದಿನ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ನಡೆಯುವ ವಿಜಯದ ಯಾತ್ರೆಯಾಗಿದೆ. ಮುಂದೆ ಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸೀಟು ಗೆದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಅಧಿಕಾರಕ್ಕೇರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ: ನಗರದ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ರಾಜ್ಯದಲ್ಲಿ ನಿಶ್ಚಿತವಾಗಿ ಗುರಿಯನ್ನು ತಲುಪಿ, ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ. ಯಾವುದೇ ಶಕ್ತಿ ಕೂಡ ನಾವು ಅಧಿಕಾರಕ್ಕೆ ಬರೋದನ್ನ ತಡೆಲು ಸಾಧ್ಯವಿಲ್ಲ ಅಂತ ನಾವೆಲ್ಲ ಮನವರಿಕೆ ಮಾಡಿಕೊಡಬೇಕಿದೆ ಎಂದರು.

ಜನರ ಕಲ್ಯಾಣಕ್ಕಾಗಿ ಅನೇಕ ಯೋಜನೆ: ಮೋದಿ ಕಾರ್ಯಕ್ರಮ, ಕೆಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಕಳೆದ ಮೂರು ವರ್ಷದಲ್ಲಿ ಕೊಟ್ಟ ಕಾರ್ಯಕ್ರಮ. ಇದನ್ನೆಲ್ಲಾ ಕಾರ್ಯಕರ್ತರು ಅರ್ಥ ಮಾಡಿಕೊಂಡು ಮನೆ ಮನೆಗೆ ತಲುಪಿಸಬೇಕು. ಕೇಂದ್ರ ಹಾಗೂ ರಾಜ್ಯದ ಯೋಜನೆ ಅರ್ಥ ಮಾಡಿಕೊಂಡು ಜನರಿಗೆ ತಲುಪಿಸೋ ಕೆಲಸ ಮಾಡಬೇಕಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಅನೇಕ ಯೋಜನೆ ರೂಪಿಸೋ ಮೂಲಕ ಸುಧಾರಣೆ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ