Breaking News

ಸರ್ವರ್‌ ಸಮಸ್ಯೆ: ರಾತ್ರಿಯವರೆಗೂ ದಾಖಲೆ ಪರಿಶೀಲನೆ

Spread the love

ಬೆಳಗಾವಿ: ಇಲ್ಲಿನ ಪಾಟೀಲ ಗಲ್ಲಿಯ ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢಶಾಲೆಯಲ್ಲಿ ಪದವೀಧರ ಪ್ರಾಥಮಿಕ ಶಾಲೆ ಶಿಕ್ಷಕರ(6ರಿಂದ 8ನೇ ತರಗತಿ) ನೇಮಕ ಪ್ರಕ್ರಿಯೆಯಲ್ಲಿ ಆಯ್ಕೆಯಾದವರ ಮೂಲ ದಾಖಲೆಗಳ ಪರಿಶೀಲನೆ ಸರ್ವರ್‌ ಸಮಸ್ಯೆಯಿಂದಾಗಿ ಶುಕ್ರವಾರ ರಾತ್ರಿ 8ರವರೆಗೂ ನಡೆಯಿತು.

 

ಈ ನೇಮಕಾತಿಯಲ್ಲಿ ಆಯ್ಕೆಯಾದವರ ತಾತ್ಕಾಲಿಕ ಪಟ್ಟಿಯನ್ನು 1:2ರ ಅನುಪಾತದಲ್ಲಿ ಪ್ರಕಟಿಸಲಾಗಿದೆ. ಮೊದಲ ದಿನದಂದು 100 ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಬೇಕಿತ್ತು. ಸರ್ವರ್‌ ಸಮಸ್ಯೆ, ಸರಿಯಾದ ದಾಖಲೆ ಇಲ್ಲದಿರುವುದು ಮತ್ತಿತರ ಕಾರಣದಿಂದ ಎಲ್ಲ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಪೂರ್ಣಗೊಂಡಿರಲಿಲ್ಲ.

ಎರಡನೇ ದಿನದಂದು ಆ ಅಭ್ಯರ್ಥಿಗಳ ಜೊತೆಗೆ, ಮತ್ತೆ 150 ಅಭ್ಯರ್ಥಿಗಳ ದಾಖಲೆ ಪರಿಶೀಲಿಸಲಾಯಿತು.


Spread the love

About Laxminews 24x7

Check Also

ಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್

Spread the loveಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್ ಜುಲೈ ಒಂದರಿಂದ ಆರಂಭಗೊಂಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ